ನವದೆಹಲಿ:ತರಗತಿಗೆ ಹೋಗುವುದರಿಂದ ತಪ್ಪಿಸಿಕೊಳ್ಳಲು ತನ್ನ ಶಾಲೆಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ 14 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಮಧ್ಯರಾತ್ರಿ 12.30ರ ಸುಮಾರಿಗೆ ಬಾಂಬ್‌ ಬೆದರಿಕೆ ಇಮೇಲ್‌ ಬಂದಿದ್ದರಿಂದ ಖಾಸಗಿ ಶಾಲೆಯಲ್ಲಿ ಆತಂಕ ಮನೆ ಮಾಡಿತ್ತು.
ಇದನ್ನೂ ಓದಿ:ಕೇಂದ್ರ, ರಾಜ್ಯ ಬಿಜೆಪಿ ನಾಯಕರ ಅಣತಿಯಂತೆ ರಾಜ್ಯಪಾಲರ ಕುಣಿತ: ಸಚಿವ ಶಿವರಾಜ್ ತಂಗಡಗಿ
ಕೂಡಲೇ ಪೊಲೀಸರನ್ನು ಕರೆಸಿ ಬಾಂಬ್ ಮತ್ತು ಶ್ವಾನ ದಳದಿಂದ ತಪಾಸಣೆ ನಡೆಸಲಾಯಿತು. ದಕ್ಷಿಣ ದೆಹಲಿಯ ಇನ್ನೂ ಎರಡು ಖಾಸಗಿ ಶಾಲೆಗಳಲ್ಲಿ ಬಾಂಬ್ ಇಡಲಾಗಿದೆ ಎಂದು ಇಮೇಲ್ ಸಂದೇಶ ಕಳುಹಿಸಲಾಗಿತ್ತು. ಸಂದೇಶ ಕಳುಹಿಸಿರುವವರು ಪಾಕಿಸ್ತಾನಿ ಜನರಲ್ ಎಂದು ಕೂಡ ಎಂದು ಹೇಳಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕನನ್ನು ಶನಿವಾರ ಬಂಧಿಸಲಾಗಿದೆ. ಆತ ಸಂಬಂಧಿಕರ ಇಮೇಲ್ ಖಾತೆಯ ಮೂಲಕ ಶಾಲಾ ಆಡಳಿತಕ್ಕೆ ಮೇಲ್ ಕಳುಹಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಇತರ ಎರಡು ಶಾಲೆಗಳಲ್ಲಿಯೂ ತಪಾಸಣೆ ನಡೆಸಲಾಯಿತು. ಆದರೆ ಮೂರರಲ್ಲಿ ಎಲ್ಲಿಯೂ ಅನುಮಾನಾಸ್ಪದವಾಗಿ ವಸ್ತುಗಳು ಕಂಡು ಬರಲಿಲ್ಲ. ವಿಚಾರಣೆಯ ಸಮಯದಲ್ಲಿ, ಮರುದಿನ ತನ್ನ ಶಾಲೆಗೆ ಹೋಗಲು ಇಷ್ಟಪಡದ ಹುಡುಗನು ಸಂಬಂಧಿಕರ ಇಮೇಲ್ ಐಡಿಯನ್ನು ಬಳಸಿಕೊಂಡು ಶಾಲೆಯ ಆಡಳಿತಕ್ಕೆ ಬಾಂಬ್ ಬೆದರಿಕೆಯನ್ನು ಕಳುಹಿಸಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬಾಲಕನನ್ನು ಜುವೆನೈಲ್ ಜಸ್ಟೀಸ್ ಬೋರ್ಡ್ (ಜೆಜೆಬಿ) ಮುಂದೆ ಹಾಜರುಪಡಿಸಲಾಯಿತು. ನಂತರ ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಿದ್ದರಾಮಯ್ಯಗೆ ಸಿಎಂ ಸ್ಥಾನದಲ್ಲಿ ಉಳಿಯುವ ನೈತಿಕತೆ ಇಲ್ಲ, ಕೂಡಲೇ ರಾಜೀನಾಮೆ ನೀಡಲಿ: ಆರ್‌.ಅಶೋಕ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − twelve =
Remember me
