ಮಹಾರಾಷ್ಟ್ರ:14 ವರ್ಷದ ಬಾಲಕನೊಬ್ಬ ಭಿವಾಂಡಿ ಮುನ್ಸಿಪಲ್ ಕಾರ್ಪೊರೇಷನ್ ಕಚೇರಿಯ ಹೊರಭಾಗದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿರುವಂತ ಆಘಾತಕಾರಿ ಬೆಳವಣಿಗೆಯೊಂದು ನಡೆದಿರುವುದು ವರದಿಯಾಗಿದೆ. ಈ ಘಟನೆ ಥಾಣೆ ಜಿಲ್ಲೆಯಲ್ಲಿ ನಡೆದಿದೆ.
ಖಾಸಗಿ ಶಾಲೆಯೊಂದರಲ್ಲಿ ವಾರ್ಷಿಕ ಶುಲ್ಕ ಪಾವತಿಸದ ಕಾರಣ ಶಾಲೆಗೆ ಹೋಗಲು ಅವಕಾಶ ನೀಡುತ್ತಿಲ್ಲ ಎಂದು ವಿದ್ಯಾರ್ಥಿ ಮತ್ತು ಪೋಷಕರು ಮುನ್ಸಿಪಲ್ ಕಾರ್ಫರೇಷನ್ ಕಚೇರಿಯ ಮುಂಭಾಗ ಕಳೆದ ಕೆಲ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಬಾಲಕ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ ಎಂದು ವರದಿಯಾಗಿದೆ.
ಬಾಲಕ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುತ್ತಿದ್ದಂತೆ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಕೂಡಲೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಘಟನಾ ಸ್ಥಳಕ್ಕೆ ಬಂದ ಪೊಲೀಸರು, ಬಾಲಕ ಹಾಗೂ 5 ಮಹಿಳೆಯರು ಸೇರಿದಂತೆ ಒಟ್ಟು 19 ಜನರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಸಮಾಜದ ಸ್ವಾಸ್ಥ್ಯಕ್ಕೆ ಧಕ್ಕೆ ತಂದ ಆರೋಪದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಳೆದ ಕೆಲವು ತಿಂಗಳುಗಳ ಹಿಂದೆ ದೇಶದಾದ್ಯಂತ ಪಿಎಫ್​ಐ ಸಂಘಟನೆಯ ಕಚೇರಿ ಮೇಲೆ ದಾಳಿಯಾಗಿತ್ತು. ಜತೆಗೆ ಕಾರ್ಯಕರ್ತರ ಬಂಧನವೂ ಆಗಿತ್ತು. ಇದನ್ನು ವಿರೋಧಿಸಿ ಪುಣೆ ನಗರದ ಜಿಲ್ಲಾಧಿಕಾರಿ ಕಚೇರಿಯ ಮುಂಭಾಗದಲ್ಲಿ ಪಿಎಫ್​ಐ ಪ್ರತಿಭಟನೆಯನ್ನು ವಿರೋಧಿಸಿತ್ತು. ಸೆಪ್ಟೆಂಬರ್‌ನಲ್ಲಿ, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಪುಣೆಯಲ್ಲಿ ನಡೆಸಿದ ಆಂದೋಲನದ ಸಂದರ್ಭದಲ್ಲಿ ಪ್ರತಿಭಟನಾಕಾರರು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದೀಗ ಮತ್ತೆ 14 ವರ್ಷದ ಬಾಲಕನೊಬ್ಬ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ.
ಸದ್ಯ ಘಟನೆಯ ಬಗ್ಗೆ ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಪೂರ್ಣ ಪ್ರಮಾಣದ ತನಿಖೆಯ ನಂತರ ಬಾಲಕನ ಕೃತ್ಯದ ಬಗ್ಗೆ ಸತ್ಯಾಸತ್ಯತೆ ಹೊರಬರಬೇಕಿದೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 3 =
Remember me
