ತಮಿಳುನಾಡು:ನಾಮಕ್ಕಲ್ ಜಿಲ್ಲೆಯ ರೆಸ್ಟೊರೆಂಟ್‌ನಲ್ಲಿಚಿಕನ್ ಶವರ್ಮಾ ತಿಂದ 14 ವರ್ಷದ ಬಾಲಕಿ ವಿಷ ಸೇವಿಸಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಶುಕ್ರವಾರ ಮತ್ತು ಶನಿವಾರದಂದು ರೆಸ್ಟೋರೆಂಟ್‌ನಲ್ಲಿ ಊಟ ಮಾಡಿದ 43 ಕ್ಕೂ ಹೆಚ್ಚು ಜನರು, ಬಾಲಕಿಯ ಕುಟುಂಬ ಸದಸ್ಯರು ಸಹ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಉಮಾ ತಿಳಿಸಿದ್ದಾರೆ.ಘಟನೆಯ ನಂತರ, ನಾಮಕ್ಕಲ್ ಜಿಲ್ಲೆಯಾದ್ಯಂತ ಹೋಟೆಲ್‌ಗಳಲ್ಲಿ ಶಾವರ್ಮಾ ಮತ್ತು ಗ್ರಿಲ್ಡ್ ಮತ್ತು ತಂದೂರಿ ಚಿಕನ್ ಖಾದ್ಯಗಳ ಮಾರಾಟವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಕಂದಾಯ ಅಧಿಕಾರಿಗಳ ಪ್ರಕಾರ, ನಾಮಕಲ್ ಮುನ್ಸಿಪಾಲಿಟಿ ಹೈಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿನಿ ಟಿ ಕಲೈಅರಸಿ (14) ಮೃತ ಬಾಲಕಿ. ಈಕೆ ತನ್ನ ಪೋಷಕರಾದ ತವಕುಮಾರ್ ಅವರೊಂದಿಗೆ ಹೋಟೆಲ್‌ಗೆ ಭೇಟಿ ನೀಡಿದ್ದರು.  ಊಟ ಸೇವಿಸಿ ಮನಗೆ ತೆರಳಿದ ನಂತರ ಅದೇ ದಿನ ಬಾಲಕಿ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ನಂತರ ಆಕೆಯ ಪೋಷಕರು ಹತ್ತಿರದ ಆಸ್ಪತ್ರೆಗೆ ಕರೆದೊಯ್ದರು. ಅವರನ್ನು ಪರೀಕ್ಷಿಸಿದ ವೈದ್ಯರು ಫುಡ್ ಪಾಯ್ಸನ್ ಎಂದು ಹೇಳಿದ್ದಾರೆ. ಚಿಕಿತ್ಸೆ ಬಳಿಕ ಪೋಷಕರು ಬಾಲಕಿಯನ್ನು ಮನೆಗೆ ಕರೆತಂದಿದ್ದಾರೆ. ಆದರೆ ಮರುದಿನ ಬಾಲಕಿ ಪ್ರಾಣ ಬಿಟ್ಟಿದ್ದಾಳೆ.
ಪೋಷಕರು ಅಳಲು ತೋಡಿಕೊಂಡು,ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದು, ಕೂಡಲೇ ಅದನ್ನು ಮುಚ್ಚಬೇಕು ಎಂದು ಒತ್ತಾಯಿಸಿದರು.ಕೆಲ ದಿನಗಳ ಹಿಂದೆ ಇದೇ ರೆಸ್ಟೊರೆಂಟ್‌ನಲ್ಲಿ ಮಾಂಸಾಹಾರ ಸೇವಿಸಿ ಹಲವು ಮಂದಿ  ಅಸ್ವಸ್ಥರಾಗಿದ್ದು, ಅವರೆಲ್ಲರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.
ಆಹಾರ ಸುರಕ್ಷತಾ ಅಧಿಕಾರಿಗಳು ರೆಸ್ಟೋರೆಂಟ್ ಮೇಲೆ ದಾಳಿ ನಡೆಸಿದ್ದಾರೆ.ಅಲ್ಲಿ ಆಹಾರದ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.ರೆಸ್ಟೋರೆಂಟ್ ನಡೆಸುತ್ತಿದ್ದ ಮೂವರನ್ನು ಬಂಧಿಸಲಾಗಿದೆ.ಅಲ್ಲದೇ ರೆಸ್ಟೊರೆಂಟ್ ನಲ್ಲಿ ಕೊಳೆತ ಚಿಕನ್ ನಿಂದ ಶವರ್ಮಾ, ತಂದೂರಿ, ಗ್ರಿಲ್ಡ್ ಚಿಕನ್ ಮುಂತಾದ ಖಾದ್ಯಗಳನ್ನು ತಯಾರಿಸುತ್ತಿರುವುದು ಕಂಡುಬಂದಿದೆ.ಇವುಗಳಿಂದ ಆಹಾರ ವಿಷ ಉಂಟಾಗಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎನ್ನಲಾಗಿದೆ. ಈ ಕುರಿತಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − twenty =
Remember me
