ಲಖನೌ:ಬಹಿರ್ದೆಸೆಗೆ ತೆರಳಿದ್ದ ಅಪ್ರಾಪ್ತೆ ಮೇಲೆ ಐವರು ದುರುಳರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಉತ್ತರಪ್ರದೇಶದ ಮೌ ಜಿಲ್ಲೆಯಲ್ಲಿ ನಡೆದಿದೆ.
ಡಿಸೆಂಬರ್​ 02ರಂದು ಘಟನೆ ನಡೆದಿದ್ದು, ಡಿಸೆಂಬರ್​ 20ರಂದು ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಪೊಲೀಸರು ಓರ್ವ ಆರೋಪಿಯನ್ನು ವಶಕ್ಕೆ ಪಡೆದಿದ್ದು, ತಲೆಮಾರಿಸಿಕೊಂಡಿರುವ ನಾಲ್ವರನ್ನು ಪತ್ತೆಹಚ್ಚಲು ವಿಶೇಷ ತಂಡ ಒಂದನ್ನು ರಚಿಸಿದ್ದಾರೆ.
ಇದನ್ನೂ ಓದಿ:ಪ್ರಿಯತಮೆಯ ಎರಡನೇ ಲವ್​ ಪ್ರಶ್ನಿಸಿದ ಪೇದೆ; ಬೆಂಕಿ ಹಚ್ಚಿ ಹತ್ಯೆ
ಈ ಕುರಿತು ಪ್ರತಿಕ್ರಿಯಿಸಿರುವ ಹೆಚ್ಚುವರಿ ಪೊಲೀಸ್ ಆಯುಕ್ತ ಮಹೇಶ್‌ಸಿಂಗ್‌ ಅತ್ರಿ, ಬಹಿರ್ದೆಸೆಗೆ ತೆರಳಿದ್ದ ವೇಲೆ ಐವರು ದುರುಳರು ಅಪ್ರಾಪ್ತೆಯನ್ನು ಅಪಹರಿಸಿ ಕೃತ್ಯ ಎಸಗಿದ್ದಾರೆ. ಆರೋಪಿಗಳು ತಮ್ಮ ಮೊಬೈಲ್​ ಫೋನಿನಲ್ಲಿ ವಿಡಿಯೋವನ್ನು ಚಿತ್ರೀಕರಿಸಿದ್ದು, ಯಾರಿಗಾದರೂ ಹೇಳಿದರೆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್​ ಮಾಡುವುದಾಗಿ ಬೆದರಿಸಿದ್ದಾರೆ.
ಡಿಸೆಂಬರ್​ 20ರಂದು ಬಾಲಕಿ ನಡೆದ ಘಟನೆ ಬಗ್ಗೆ ತನ್ನ ಪೋಷಕರ ಬಳಿ ಹೇಳಿಕೊಂಡಿದ್ದು, ಆಕೆಯ ತಂದೆ ಸಲ್ಲಿಸಿದ ದೂರಿನ ಆಧಾರದ ಮೇಲೆ ಭಾರತ ದಂಡ ಸಂಹಿತೆ (IPC Section), ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಓರ್ವ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ನಾಲ್ವರು ಆರೋಪಿಗಳು ತಲೆಮಾರಿಸಿಕೊಂಡಿದ್ದು, ಅವರನ್ನು ಪತ್ತೆಹಚ್ಚಲು ವಿಶೇಷ ತಂಡ ರಚಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಮಹೇಶ್‌ಸಿಂಗ್‌ ಅತ್ರಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + fourteen =
Remember me
