ರಾಯ್​ಪುರ:ಹೆಚ್ಚು ಸಮಯ ಮೊಬೈಲ್​ ಬಳಸಬೇಡ ಎಂದು ಬುದ್ದಿವಾದ ಹೇಳಿದ್ದಕ್ಕೆ ಅಪ್ರಾಪ್ತ ವಯಸ್ಕ ಸಹೋದರಿಯೊಬ್ಬಳು ತನ್ನ ಸಹೋದರನನ್ನೇ ಕೊಡಲಿಯಲ್ಲಿ ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಛತ್ತೀಸ್​ಗಢದ ಖೈರಗಢ-ಚುಯಿಖಾದನ್-ಗಂಡೈ ಜಿಲ್ಲೆಯಲ್ಲಿ ನಡೆದಿದೆ.
ಅಮ್ಲಿದಿಹ್ಕಲಾ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೃತ ಯುವಕನ ವಯಸ್ಸು 18 ವರ್ಷ ಎಂದು ತಿಳಿದು ಬಂದಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಆರ್​ಸಿಬಿ ವಿರುದ್ಧ 4 ವಿಕೆಟ್​ಗಳ ಸೋಲು; ಗುಜರಾತ್​ ನಾಯಕ ಶುಭಮನ್​ ನೀಡಿದ ಸ್ಪಷ್ಟನೆ ಹೀಗಿದೆ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಘಟನೆ ನಡೆದ ಸಮಯದಲ್ಲಿ ಅಪ್ರಾಪ್ತೆ ಹಾಗೂ ಆಕೆಯ ಸಹೋದರ ಇಬ್ಬರೇ ಮನೆಯಲ್ಲಿದ್ದರು. ಈ ವೇಳೆ ಸಹೋದರ ಫೋನನ್ನು ಹೆಚ್ಚು ಸಮಯ ಬಳಸದಂತೆ ಬುದ್ದಿವಾದ ಹೇಳಿದ್ದ. ಬಳಿಕ ಆತ ನಿದ್ದೆಗೆ ಜಾರಿದನ್ನು ಗಮನಿಸಿದ ಅಪ್ರಾಪ್ತ ಕೊಡಲಿಯಿಂದ ಆತನ ಕುತ್ತಿಗೆ ಭಾಗಕ್ಕೆ ಹೊಡೆದಿದ್ದಾಳೆ. ಪರಿಣಾಮ ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ನಂತರ ಸ್ನಾನ ಮಾಡಿ ತನ್ನ ಬಟ್ಟೆಯ ಮೇಲಿನ ರಕ್ತದ ಕಲೆಗಳನ್ನು ಸ್ವಚ್ಛಗೊಳಿಸಿ, ತನ್ನ ಅಣ್ಣನನ್ನು ಯಾರೋ ಹತ್ಯೆ ಮಾಡಿದ್ದಾರೆ ಎಂದು ಅಕ್ಕಪಕ್ಕದ ಮನೆಯವರಿಗೆ ವಿಷಯ ತಿಳಿಸಿದ್ದಾಳೆ. ವಿಚಾರ ತಿಳಿದು ಸ್ಥಳಕ್ಕೆ ಧಾವಿಸಿದ ಪೊಲೀಸರು ಅಪ್ರಾಪ್ತೆಯನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದಾಗ ಆತನನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾಳೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
