ಸೂರತ್​:ಫುಟ್​ಪಾತ್​ ಮೇಲೆ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಟ್ರಕ್​​ ಹರಿದು 15 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಗುಜರಾತ್​ನ ಸೂರತ್​ನಲ್ಲಿ ಮಂಗಳವಾರ ಬೆಳ್ಳಂಬೆಳಗ್ಗೆ ನಡೆದಿದೆ.
ಟ್ರಕ್​ ಮತ್ತು ಕಬ್ಬು ತುಂಬಿದ ಟ್ರ್ಯಾಕ್ಟರ್​ ನಡುವೆ ಡಿಕ್ಕಿಯಾಗಿ ನಿಯಂತ್ರಣ ಕಳೆದುಕೊಂಡು ಟ್ರಕ್​ ಡ್ರೈವರ್​, ಫುಟ್​ಪಾತ್​ ಕಡೆ ವಾಹನವನ್ನು ನುಗ್ಗಿಸಿದ್ದಾನೆ. ಈ ವೇಳೆ ಸವಿನಿದ್ದೆಯಲ್ಲಿದ್ದ 15 ವಲಸೆ ಕಾರ್ಮಿಕರ ಮೇಲೆ ಟ್ರಕ್​ ಹರಿದು ಮೃತಪಟ್ಟಿದ್ದಾರೆ. ಕಾರ್ಮಿಕರು ಮಾಂಡವಿ ಹೆದ್ದಾರಿಯ ಫುಟ್​ಪಾತ್​ ಮೇಲೆ ಮಲಗಿದ್ದಾಗ ದುರ್ಘಟನೆ ಸಂಭವಿಸಿದೆ.
ಇದನ್ನೂ ಓದಿರಿ:ಪಂಚರ್​ ಟೈಯರ್​ನಲ್ಲೇ ಪತ್ನಿ ಮನೆಗೆ ಪ್ರಯಾಣ ಬೆಳೆಸಿದ ಯುವಕನಿಗೆ ಕಾದಿತ್ತು ಶಾಕ್​! ಅಪಘಾತವಂತೂ ಅಲ್ಲ
ಮೃತರೆಲ್ಲರು ರಾಜಸ್ಥಾನದ ಬನ್​ಸ್ವಾರ ಮೂಲದವರೆಂದು ತಿಳಿದುಬಂದಿದೆ. ಮೃತರ ಸಾವಿಗೆ ಬಿಜೆಪಿ ಮುಖಂಡ ಹಾಗೂ ಲೋಕಸಭಾ ಸ್ಪೀಕರ್​ ಓಂ ಬಿರ್ಲಾ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಸಾವಿನ ದುಃಖ ತಡೆದುಕೊಳ್ಳುವ ಶಕ್ತಿ ನೀಡಲೆಂದು ದೇವರಲ್ಲಿ ಪಾರ್ಥಿಸಿಕೊಳ್ಳುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದಿದ್ದಾರೆ.(ಏಜೆನ್ಸೀಸ್​)
ಎಷ್ಟೇ ಸಂಧಾನ ಮಾಡಿದ್ರೂ ಸಹಿಸದ ಮನಸ್ಸು: ಹೊಂಚು ಹಾಕಿ ಮಲಗಿದ್ದ ಪತ್ನಿಯನ್ನೇ ಕೊಂದ ಪತಿರಾಯ!

ಇದು ಗಂಡ-ಹೆಂಡತಿ, ಅಕ್ಕ-ತಂಗಿಯಿಂದ ಹನಿಟ್ರ್ಯಾಪ್​; ಫೇಸ್​ಬುಕ್​ ಮೂಲಕ ಹಾಕುತ್ತಾರೆ ಗಾಳ…

VIDEO| ಮೈಕಲ್​ ಜಾಕ್ಸನ್​ ಮೂನ್​ ವಾಕ್​ ಮೂಲಕ ಸಂಚಾರ ನಿರ್ವಹಿಸೋ ಪೇದೆಯ ಹಿಂದಿದೆ ಕಣ್ಣೀರ ಕತೆ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
