ದೆಹಲಿ:ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕ ಸೇರಿದಂತೆ 15 ರಾಜ್ಯಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಮುನ್ಸೂಚನೆಯನ್ನು ನೀಡಿದೆ.ಈ ಕುರಿತು ಪಟ್ಟಿಯನ್ನು ಬಿಡುಗಡೆ ಮಾಡಿರುವ ಹವಾಮಾನ ಇಲಾಖೆಯು ಮುಂದಿನ ಹಲವು ದಿನಗಳವರೆಗೆ ಗುಜರಾತ್, ಪಶ್ಚಿಮ ಬಂಗಾಳ, ಸಿಕ್ಕಿಂ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಅರುಣಾಚಲ ಪ್ರದೇಶ, ಉತ್ತರಾಖಂಡ, ದಕ್ಷಿಣ ಹರಿಯಾಣ, ನೈಋತ್ಯ ರಾಜಸ್ಥಾನ, ಪೂರ್ವ ರಾಜಸ್ಥಾನ, ಪಶ್ಚಿಮ ಮಧ್ಯಪ್ರದೇಶ, ಕರಾವಳಿ ಕರ್ನಾಟಕ, ದಕ್ಷಿಣ ಆಂತರಿಕ ಕರ್ನಾಟಕ, ಅಸ್ಸಾಂ ಮತ್ತು ಮೇಘಾಲಯ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆಯನ್ನು ನೀಡಿದೆ.ಇದನ್ನೂ ಓದಿ:ದಿನಸಿ ಖರೀದಿಸಿ ತರುವ ಮಜವೇ ಬೇರೆ! ಖುದ್ದಾಗಿ ಹೋಗಿ ಶಾಪಿಂಗ್ ಮಾಡಿದ ಸ್ಯಾಂಡಲ್​ವುಡ್ ನಟ ಯಾರು? ಗೆಸ್ ಮಾಡಿ…ತೀವ್ರ ಸ್ವರೂಪ ಪಡೆಯುತ್ತಿರುವ ಬಿಪರ್​ಜಾಯ್ ಚಂಡಮಾರುತದ ಪರಿಣಾಮದಿಂದಾಗಿ ಕರ್ನಾಟಕದ ಕರಾವಳಿ ಭಾಗದಲ್ಲಿ ಈಗಾಗಲೇ ಅಲ್ಲಲ್ಲಿ ಮಳೆಯಾಗಿದೆ. ಹಾಗಾಗಿ ಈ ಪ್ರದೇಶಗಳಲ್ಲಿ ಹೈ ಅಲರ್ಟ್​ ಘೋಷಣೆ ಮಾಡಿದ್ದು, ಮುಂದಿನ 5 ದಿನಗಳ ಕಾಲ ಸಮುದ್ರದಲ್ಲಿ ಇಳಿಯದಂತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ವ್ಯಾಪಕ ಹಾನಿಯುಂಟುಮಾಡುವ ಸಾಮರ್ಥ್ಯ ಹೊಂದಿರುವ ಬಿಪರ್​ಜಾಯ್ ಚಂಡಮಾರುತದ ಪ್ರಭಾವದಿಂದಾಗಿ ಭೂಕುಸಿತ ಹಾಗೂ ಭಾರಿ ಮಳೆ ಉಂಟಾಗಲಿದ್ದು, ಗಂಟೆಗೆ 150 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಈಗಾಗಲೇ ಬಿಪರ್‌ಜಾಯ್ ಚಂಡಮಾರುತದ ಕುರಿತಾಗಿ ರಕ್ಷಣಾ ಇಲಾಖೆಗಳು ಕೈಗೊಂಡಿರುವ ಸಿದ್ಧತೆಯನ್ನು ಪರಿಶೀಲಿಸಿ, ಯಾವುದೇ ಸಾವು-ನೋವು ಸಂಭವಿಸದಂತೆ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:8 + fourteen =
Remember me
