ಮುಂಬೈ:ಆರ್ಥಿಕ ರಾಜಧಾನಿ ಎಂದೇ ಖ್ಯಾತಿ ಪಡೆದಿರುವ ಮುಂಬೈ ಮೇಲೆ ನಡೆದ ವಿನಾಶಕಾರಿ ಭಯೋತ್ಪಾದಕ ದಾಳಿ ಭಾರತ ಮಾತ್ರವಲ್ಲದೆ ಇಡೀ ವಿಶ್ವವನ್ನೇ ತಲ್ಲಣಗೊಳಿಸಿತ್ತು. 10 ಮಂದಿ ಭಯೋತ್ಪಾದಕರ ಈ ಸಂಘಟಿತ ದಾಳಿಯಲ್ಲಿ 166 ಮಂದಿ ಮೃತಪಟ್ಟಿದ್ದರು ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದರು.
ಲಷ್ಕರ್​-ಎ-ತೋಯ್ಬಾ (LET) ಸಂಘಟನೆಯ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 166 ಮಂದಿ ಮೃತಪಟ್ಟು, 300ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಈ ದುರಂತ ಸಂಭವಿಸಿ 15 ವರ್ಷಗಳು ಕಳೆದರೂ ಸಹ ಘಟನೆಯ ಕರಾಳತೆ, ಮೃತಪಟ್ಟವರ ನೆನಪು, ಕುಟುಂಬಗಳ ರೋಧನೆ ಇನ್ನು ಜೀವಂತವಾಗಿದೆ.
ಇದನ್ನೂ ಓದಿ:VIDEO| ಕುಸಾಟ್​ ಟೆಕ್​ಫೆಸ್ಟ್​ನಲ್ಲಿ ಕಾಲ್ತುಳಿತ; 4 ವಿದ್ಯಾರ್ಥಿಗಳು ಮೃತ್ಯು, ಹಲವರು ಗಂಭೀರ
ಭಾರತೀಯರು, ಯರೋಪಿಯನ್ನರು ಹಾಗೂ ಯಹೂದಿಗಳು ಹೆಚ್ಚಾಘಿ ಭೇಟಿ ನೀಡುವ ತಾಜ್​, ಒಬೆರಾಯ್​, ಛತ್ರಪತಿ ಶಿವಾಜಿ ರೈಲು ನಿಲ್ದಾಣ, ನಾರಿಮನ್​ ಹೌಸ್​ನಲ್ಲಿ ಗರಿಷ್ಠ ಜನಸಂದಣಿ ಇರುವ ಬಗ್ಗೆ ಸಮೀಕ್ಷೆ ನಡೆಸಿದ ಉಗ್ರರು ಯೋಜನೆ ರೂಪಿಸಿ ದಾಳಿ ನಡೆಸಿದ್ದರು. ಮುಂಬೈ ದಾಳಿಯಲ್ಲಿ ಭಾಗಿಯಾಗಿದ್ದ 10 ಉಗ್ರರ ಪೈಕಿ 9 ಮಂದಿಯನ್ನು ಹೊಡೆದುರುಳಿಸುವಲ್ಲಿ ಭದ್ರತಾ ಪಡೆಗಳು ಯಶಸ್ವಿಯಾಗಿದ್ದವು.
ಈ ಪೈಕಿ ಬದುಕುಳಿದಿದ್ದ ಓರ್ವ ಉಗ್ರ ಮೊಹಮ್ಮದ್​ ಅಜ್ಮಲ್​ ಅಮೀರ್​ ಕಸಬ್​ಗೆ 2010ರಲ್ಲಿ ಮರಣದಂಡನೆ ವಿಧಿಸಿ 2012ರಲ್ಲಿ ಗಲ್ಲಿಗೇರಿಸಲಾಗಿತ್ತು. ಈ ದುರಂತ ಭಯೋತ್ಪಾದನಾ ದಾಳಿಯ 15ನೇ ವಾರ್ಷಿಕೋತ್ಸವವನ್ನು ಗುರುತಿಸುವ ಮೂಲಕ ಇಸ್ರೇಲ್​ ಸರ್ಕಾರವು ಲಷ್ಕರ್​-ಎ-ತೋಯ್ಬಾ (LET) ಸಂಘಟನೆಯನ್ನು ಭಯೋತ್ಪಾದಕಾ ಸಂಘಟನೆ ಎಂದು ಘೋಷಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 2 =
Remember me
