ಮುಂಬೈ:ಪಪ್ಪಾಯಿ ತುಂಬಿದ ಟ್ರಕ್​ ಉರುಳಿಬಿದ್ದ ಪರಿಣಾಮ 16 ಮಂದಿ ದಾರುಣವಾಗಿ ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಜಲ್ಗಾಂವ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ. ಅಪಘಾತದಲ್ಲಿ 5 ಮಂದಿಯ ಸ್ಥಿತಿ ಗಂಭೀರವಾಗಿದೆ.
ಯವಾಲ್​ ತಾಲೂಕಿನ ಕಿಂಗೌನ್​ ಗ್ರಾಮದ ದೇವಸ್ಥಾನದ ಬಳಿ ಭಾನುವಾರ ಮಧ್ಯರಾತ್ರಿ ದುರ್ಘಟನೆ ಸಂಭವಿಸಿದೆ. ಮೃತರೆಲ್ಲರು ಜಲ್ಗಾಂವ್​ ಜಿಲ್ಲೆಯ ಅಭೋದಾ, ಕೆರ್ಹಾಲಾ ಮತ್ತು ರೆವೆರಾ ಮೂಲದ ಕಾರ್ಮಿಕರು ಎಂದು ತಿಳಿದುಬಂದಿದೆ. ಗಂಭೀರವಾಗಿ ಗಾಯಗೊಂಡಿರುವ ಐವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿರಿ:ಪೊಲೀಸ್ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ತಡೆಗೆ 8 ಹೊಸ ನಿಯಮ ಅನುಷ್ಠಾನ
ಟ್ರಕ್​ನಲ್ಲಿ ಒಟ್ಟು 21 ಮಂದಿ ಇದ್ದರು. ಪಪ್ಪಾಯಿ ತುಂಬಿಕೊಂಡು ಧುಲೆಯಿಂದ ಛೋಪ್ರಾಗೆ ತೆರಳುತ್ತಿತ್ತು. ವೇಗವಾಗಿ ತೆರಳುತ್ತಿದ್ದ ಟ್ರಕ್​ ನಿಯಂತ್ರಣ ಕಳೆದುಕೊಂಡು ಪಲ್ಟಿ ಹೊಡೆದು ಅವಘಡ ಸಂಭವಿಸಿದೆ.
ಮಾಹಿತಿ ತಿಳಿದು ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಸ್ಥಳೀಯರ ನೆರವಿನಿಂದ ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿದರು. ಮೃತದೇಹಗಳನ್ನು ಶವಪರೀಕ್ಷೆಗೆಂದು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.(ಏಜೆನ್ಸೀಸ್​)
ಇಳಿಕೆ ಹಾದಿಯಲ್ಲಿ ಚಿನ್ನದ ದರ

ಓವಿಯಾ ವಿರುದ್ಧ ಸೈಬರ್​ ಕ್ರೈಂಗೆ ದೂರು ನೀಡಿದ ಬಿಜೆಪಿಯಿಂದ ಗಂಭೀರ ಆರೋಪ..!

ಒಂದೇ ಮನೆಯಲ್ಲಿ ಲಾಕ್​: ವ್ಯಾಲೆಂಟೈನ್ಸ್​ ದಿನ ಬಯಲಾಯ್ತು ಯುವಕ-ಯುವತಿಯ ಲಾಕ್​ಡೌನ್​​ ರಹಸ್ಯ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 3 =
Remember me
