ಉತ್ತರಪ್ರದೇಶ:ವಿಶ್ವವಿದ್ಯಾಲಯಗಳಲ್ಲಿ ಶೈಕ್ಷಣಿಕ ಕಾರಣಕ್ಕೆ ಪ್ರತಿಭಟನೆಗಳಾಗುವುದು ಸಹಜ. ಆದರೆ ಇಲ್ಲೊಂದು ಕಡೆ ವೇತನ ಕೊಡಲಿಲ್ಲ ಎಂಬ ಕಾರಣಕ್ಕೆ ದೊಡ್ಡ ಪ್ರತಿಭಟನೆ ನಡೆದಿದೆ. ವಿಶ್ವವಿದ್ಯಾಲಯದ ಸಾವಿರಾರು ಮಂದಿ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ.
ಉತ್ತರಪ್ರದೇಶದ ಅಲಿಘರ್​ ಮುಸ್ಲಿಂ ಯುನಿವರ್ಸಿಟಿ ಬೋಧಕೇತರ ಸಿಬ್ಬಂದಿಗೆ ಸಂಬಳ ಕೊಟ್ಟಿಲ್ಲ ಎಂಬ ಕಾರಣಕ್ಕೆ ವಿಶ್ವವಿದ್ಯಾಲಯದ 1,600 ಮಂದಿ ಎರಡು ದಿನಗಳ ಕಾಲ ಪ್ರತಿಭಟನೆ ನಡೆಸಿದ್ದಾರೆ. ವಿವಿಯು ಕಳೆದ ತಿಂಗಳಲ್ಲಿ ವೇತನ ನೀಡಿಲ್ಲ ಎಂದು ಸಿಬ್ಬಂದಿ ಆರೋಪಿಸಿದ್ದಾರೆ.
ವಿವಿ ಮುಂದೆ ಶುಕ್ರವಾರವೇ ಈ ಪ್ರತಿಭಟನೆ ನಡೆದಿದ್ದು, ಶನಿವಾರ ಕೂಡ ಪ್ರತಿಭಟನೆ ನಡೆಸಿದ್ದಾರೆ. ಶನಿವಾರ ಉಪ ಕುಲಪತಿಯ ಕಚೇರಿ ಮುಂದೆ ಜಮಾಯಿಸಿದ ಸಿಬ್ಬಂದಿ ತಮ್ಮ ಅಹವಾಲು ಹೇಳಿಕೊಂಡರು. ಈ ಬೋಧಕೇತರ ಸಿಬ್ಬಂದಿ ದಶಕದಿಂದ ಕೆಲಸ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದು, ಕಳೆದ ತಿಂಗಳ ವೇತನ ನೀಡಿಲ್ಲ ಎಂದು ಆರೋಪಿಸಿದ್ದಾರೆ.
5 ಕೊಲೆ ಮಾಡಿದ್ದವ 28 ವರ್ಷಗಳ ಬಳಿಕ ಸಿಕ್ಕಿಬಿದ್ದ!; 3 ತಿಂಗಳಿಂದ 5 ವರ್ಷದೊಳಗಿನ 4 ಮಕ್ಕಳನ್ನು ಹತ್ಯೆ ಮಾಡಿದ್ದ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen + 13 =
Remember me
