ನವದೆಹಲಿ:2002ರಲ್ಲಿ ನಡೆದ ಗುಜರಾತ್​ ಗಲಭೆ ಪ್ರಕರಣದ 17 ಅಪರಾಧಿಗಳಿಗೆ ಸುಪ್ರೀಂಕೋರ್ಟ್​ ಮಂಗಳವಾರ ಷರತ್ತುಬದ್ಧ ಜಾಮೀನು ನೀಡಿದೆ.
ಅಪರಾಧಿಗಳನ್ನು ಇಂದೋರ್ ಹಾಗೂ ಜಬಲ್ಪುರ್ ಎರಡು ಗುಂಪುಗಳಾಗಿ ಮಾಡಿದ್ದು, ಗುಜರಾತ್​ ರಾಜ್ಯವನ್ನು ಪ್ರವೇಶಿಸುವಂತಿಲ್ಲ ಹಾಗೂ ಸಾಮಾಜಿಕ ಮತ್ತು ಆಧ್ಯಾತ್ಮಿಕ ಸೇವೆಗಳಲ್ಲಿ ತೊಡಗಿಕೊಳ್ಳುವಂತೆ ಹೇಳಿ ಜಾಮೀನು ನೀಡಿದೆ.
ಇದಕ್ಕೂ ಮುನ್ನ ಅಪರಾಧಿಗಳು ಸಾಮಾಜಿಕ ಮತ್ತು ಆಧ್ಯಾತ್ಮಿಕ ಸೇವೆ ಮಾಡುವುದರ ಕುರಿತು ಖಚಿತಪಡಿಸುವಂತೆ ಮಧ್ಯಪ್ರದೇಶದ ಇಂದೋರ್​ ಮತ್ತು ಜಬಲ್ಪುರ್​ನ ಜಿಲ್ಲಾ ಕಾನೂನು ಅಧಿಕಾರಿಗಳು ನ್ಯಾಯಾಲಯವನ್ನು ಕೋರಿದ್ದರು.
ಇದಕ್ಕೆ ಪ್ರತಿಕ್ರಿಯಿಸಿರುವ ನ್ಯಾಯಾಲಯ, ಅಪರಾಧಿಗಳು ಜೀವನೋಪಾಯಕ್ಕೆ ಕೆಲಸ ಹುಡುಕಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದು, ಅಪರಾಧಿಗಳ ನಡತೆಯ ಮೇಲೆ ಅನುಸರಣಾ ವರದಿಯನ್ನು ನೀಡುವಂತೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವನ್ನು ಕೇಳಿದೆ.
ಫೆ.27, 2002ರಲ್ಲಿ ಗುಜರಾತಿನ ಗೋಧ್ರಾದಲ್ಲಿ ಸಬರಮತಿ ಎಕ್ಸ್​ಪ್ರೆಸ್​ ರೈಲಿಗೆ ಬೆಂಕಿ ಬಿದ್ದು ಹಿಂದು ಪ್ರಯಾಣಿಕರು ಸಾವಿಗೀಡಾಗಿದ್ದರು. ಇದಾದ ಬಳಿಕ ಸರ್ದಾರ್​ಪುರ್​ ಗ್ರಾಮದಲ್ಲಿ ಉಂಟಾದ ಗಲಭೆಯಲ್ಲಿ 33 ಮುಸ್ಲೀಮರನ್ನು ಹತ್ಯೆ ಮಾಡಲಾಗಿತ್ತು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
