ಬಹ್ರೇಚ್:ಪಾಸ್‌ಪೋರ್ಟ್‌, ವಿಸಾ ನಿಯಮ ಉಲ್ಲಂಘಿಸಿ ಭಾರತದೊಳಕ್ಕೆ ನುಸುಳಿ ದೆಹಲಿಯ ನಿಜಾಮುದ್ದೀನ್‌ನಲ್ಲಿ ನಡೆದಿದ್ದ ಸಭೆಯಲ್ಲಿ ಭಾಗವಹಿಸಿದ್ದ 17 ಮಂದಿ ತಬ್ಲಿಘಿಗಳನ್ನು ಈಗ ಜೈಲಿಗೆ ಕಳುಹಿಸಲಾಗಿದೆ. ಇವರ ಕ್ವಾರಂಟೈನ್‌ ಅವಧಿ ಮುಗಿದ ಹಿನ್ನೆಲೆಯಲ್ಲಿ, ಅವರನ್ನು ಬಂಧಿಯಾಗಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ 17 ಮಂದಿಯೂ ವಿದೇಶಿಗರು. ಇಂಡೋನೇಷ್ಯಾ ಮತ್ತು ಥಾಯ್ಲೆಂಡ್‌ನಿಂದ ಜಮಾತ್‌ನಲ್ಲಿ ಭಾಗವಹಿಸಲು ಬಂದಿದ್ದರು. ಆ ಸಮಯದಲ್ಲಿ ವೀಸಾ, ಪಾಸ್‌ಪೋರ್ಟ್‌ ನಿಯಮ ಉಲ್ಲಂಘಿಸಿದ್ದರು. ಮಾರ್ಚ್‌ 31ರಂದು ಇವರೆಲ್ಲರನ್ನೂ ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಏ.12 ರಂದು ಕ್ವಾರಂಟೈನ್ ಅವಧಿ ಮುಕ್ತಾಯಗೊಂಡಿದ್ದು, ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸಿ ಈಗ ಜೈಲಿಗೆ ಕಳುಹಿಸಲಾಗಿದೆ.
ಕ್ವಾರಂಟೈನ್‌ ನಂತರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿತ್ತು. ಈ 17 ಮಂದಿಯಲ್ಲಿ ಸೋಂಕು ಪತ್ತೆಯಾಗದ ಕಾರಣ, ಈಗ ಜೈಲಿಗೆ ಕಳುಹಿಸಲಾಗಿದೆ.
ಈ ಎಲ್ಲರ ವಿರುದ್ಧ ಎಪಿಡೆಮಿಕ್ ಡಿಸೀಸಸ್ ಕಾಯ್ದೆ (1897) ೦3, ಪಾಸ್‌ಪೋರ್ಟ್‌ ಕಾಯ್ದೆ (1967) ಸೆಕ್ಷನ್ 12(3) ಐಪಿಸಿ ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.(ಏಜೆನ್ಸೀಸ್​)
ತಾಯ್ತನದ ರಜೆ ಬೇಡವೆಂದು ತಿಂಗಳ ಮಗುವಿನೊಂದಿಗೆ ಕರೊನಾ ಕರ್ತವ್ಯಕ್ಕೆ ಹಾಜರಾದ ಐಎಎಸ್​ ಅಧಿಕಾರಿ

ಲಾಕ್‌ಡೌನ್‌: ಹೆಚ್ಚುತ್ತಿದೆ ಸ್ಕ್ರೀನ್‌ಟೈಂ, ಇರಲಿ ಎಚ್ಚರ… ವೈರಸ್‌ ಭೀತಿ ಮುಗಿಯುವುದರೊಳಗೆ ಕಣ್ಣಿನ ದೃಷ್ಟಿ ಕಳೆದುಕೊಳ್ಳದಿರಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
