ನವದೆಹಲಿ:ಅಪ್ರಾಪ್ತ ವಯಸ್ಕರ ಗುಂಪೊಂದು ಯುವಕನನ್ನು ಜನನಿಬಿಡ ಪ್ರದೇಶದಲ್ಲಿ ಅಮಾನುಷವಾಗಿ ಥಳಿಸಿ ಇರಿದು ಕೊಲೆ ಮಾಡಿರುವ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ಸಂಗಮ್​ ವಿಹಾರ್ ಪ್ರದೇಶದಲ್ಲಿ ನಡೆದಿದೆ.
ಪ್ರಕರಣ ಸಂಬಂಧ ಪೊಲೀಸರು 8ಮಂದಿ ಅಪ್ರಾಪ್ತ ವಯಸ್ಕರು ಹತ್ಯೆಗೆ ಬಳಸಲಾಗಿದ್ದ ಆಯುಧಗಳನ್ನು ವಶಕ್ಕೆ ಪಡೆದಿದ್ದು, ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ.
#DelhiCrime#DelhiPolice#SangamViharpic.twitter.com/DXs569kTPf
ಇದನ್ನೂ ಓದಿ:ಜಿ-20 ಶೃಂಗಸಭೆಯಲ್ಲಿ ನ್ಯೂ ಡೆಲ್ಲಿ ಡಿಕ್ಲರೇಷನ್​ ಅಂಗೀಕಾರ; ಭಾರತದ ಅಧ್ಯಕ್ಷತೆಗೆ ಮಹತ್ವದ ಗೆಲುವು
ಘಟನೆ ಕುರಿತು ಪ್ರತಿಕ್ರಿಯಿಸಿರುವ ಡಿಸಿಪಿ ಚಂದನ್​ ಚೌಧರಿ ವರ್ಷದ ಹಿಂದೆ ಮೆರವಣಿಗೆಯೊಂದರಲ್ಲಿ ನಡೆದಿದ್ದ ಜಗಳ ಸಂಬಂಧ ಯುವಕನನ್ನು ಹತ್ಯೆ ಮಾಡಲಾಗಿದೆ. ಮಜಿದಾ ಆಸ್ಪತ್ರೆ ಸಿಬ್ಬಂದಿಯೊಬ್ಬರು ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡಿರುವ ವ್ಯಕ್ತಿ ದಾಖಲಾಗಿರುವ ಬಗ್ಗೆ ನಮಗೆ ಮಾಹಿತಿ ನೀಡಿದರು.
ಅಧಿಕಾರಿಗಳು ಆಸ್ಪತ್ರೆ ತಲುಪುವಷ್ಟರಲ್ಲೇ ಆತ ಚಿಕಿತ್ಸೆ ಫಲಕಾರಿಯಾಗದೆ ಮರತಪಟ್ಟಿದ್ದ. ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ಘಟನೆ ನಡೆದ ಸ್ಥಳದ ಸುತ್ತ ಅಳವಡಿಸಿದ್ದ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಕೃತ್ಯದಲ್ಲಿ ಭಾಗಿಯಾಗಿದ್ದ 8ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಶೀಘ್ರದಲ್ಲೇ ಚಾರ್ಜ್​ಶೀಟ್​ ಸಿದ್ದಪಡಿಸಿ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಡಿಸಿಪಿ ಚಂದನ್​ ಚೌಧರಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:sixteen − five =
Remember me
