ಜಮ್ಮು-ಕಾಶ್ಮೀರ:ದೇಶದಲ್ಲಿ ಪರಿಸರ ಸಂರಕ್ಷಣೆ, ಸಾಮಾಜಿಕ ಸೌಹಾರ್ದತೆ ಹಾಗೂ ಸಾಂಪ್ರದಾಯಿಕ ಕುಟುಂಬ ಪದ್ದತಿಯನ್ನು ಭದ್ರಪಡಿಸುವ ನಿಟ್ಟಿನಲ್ಲಿ ಸಂಘ ಮತ್ತು ಅದರ ಅಂಗಸಂಸ್ಥೆಗಳು ಕೆಲಸ ಮಾಡಬೇಕೆಂದು ಆರ್​ಎಸ್​ಎಸ್​ನ ಮುಖ್ಯಸ್ಥ ಮೋಹನ್​ ಭಾಗವತ್​ ಕರೆ ನೀಡಿದ್ದಾರೆ.
ಮೂರು ದಿನಗಳ ಜಮ್ಮು-ಕಾಶ್ಮೀರ ಪ್ರವಾಸದಲ್ಲಿರುವ ಮೋಹನ್ ಭಾಗವತ್, ಆರ್​ಎಸ್​ಎಸ್​ ಸಹಭಾಗಿತ್ವದಲ್ಲಿ ಆಯೋಜನೆಗೊಂಡಿದ್ದ ಸಮನ್ವ ಬೈಠಕ್​ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ್ದಾರೆ.
ಆರ್​ಎಸ್​ಎಸ್​ ಸಂದೇಶವನ್ನು ಪ್ರತಿ ಮನೆಗೂ ತಲುಪುವಂತೆ ಸಾಂಸ್ಥಿಕ ಜಾಲಗಳನ್ನು ಮತ್ತಷ್ಟು ಹರಡುವ ಅಗತ್ಯವಿದೆ. 2025ರಲ್ಲಿ ಆರ್​ಎಸ್​ಎಸ್​ ಶತಮಾನೋತ್ಸವ ಕಾರ್ಯಕ್ರಮ ನಡೆಯಲಿದ್ದು, ಈ ನಿಟ್ಟಿನಲ್ಲಿ ನಾವು ನಮ್ಮ ಜಾಲವನ್ನು ಮತ್ತಷ್ಟು ಹರಡಬೇಕಿದೆ.
ಇದನ್ನೂ ಓದಿ:ಉದ್ಯೋಗಾಕಾಂಕ್ಷಿ ಆತ್ಮಹತ್ಯೆ ಪ್ರಕರಣ; ತೆಲಂಗಾಣದಲ್ಲಿ ಯುವಕರ ಕನಸು, ಆಕಾಂಕ್ಷೆಗಳ ಹತ್ಯೆ ಮಾಡಲಾಗಿದೆ: ರಾಹುಲ್ ಗಾಂಧಿ
ದೇಶದಲ್ಲಿ ಪರಿಸರ ಸಂರಕ್ಷಣೆ, ಸಾಮಾಜಿಕ ಸೌಹಾರ್ದತೆ ಹಾಗೂ ಸಾಂಪ್ರದಾಯಿಕ ಕುಟುಂಬ ಪದ್ದತಿಯನ್ನು ಭದ್ರಪಡಿಸುವ ನಿಟ್ಟಿನಲ್ಲಿ ಸಂಘ ಮತ್ತು ಅದರ ಅಂಗಸಂಸ್ಥೆಗಳು ಕೆಲಸ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಕಾರ್ಯಪ್ರವೃತ್ತರಾಗಬೇಕಿದೆ. ಗ್ರಾಮಗಳ ಅಭಿವೃದ್ಧಿ ಮತ್ತು ಗ್ರಾಮೀಣ ಆರ್ಥಿಕತೆಗಾಗಿ ನಾವು ಇನ್ನಷ್ಟು ಕಾರ್ಯಕ್ರಮಗಳನ್ನು ರೂಪಿಸುವ ಅಗತ್ಯತೆ ಇದೆ ಎಂದು ಹೇಳಿದ್ದಾರೆ.
ಸಮನ್ವ ಬೈಠಕ್​ ಕಾರ್ಯಕ್ರಮದಲ್ಲಿ 38 ಸಂಘಟನೆಯ 100ಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಇದಲ್ಲದೆ ಸಭೆಯಲ್ಲಿ ವಿವಿಧ ಸಾಮಾಜಿಕ ಸಮಸ್ಯೆಗಳ ಕುರಿತು ಚರ್ಚಿಸಲಾಯಿತು ಮತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಾಯಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 11 =
Remember me
