ನವದೆಹಲಿ:18ನೇ ಲೋಕಸಭೆಯ ಮೊದಲ ಅಧಿವೇಶನವು ಜೂನ್​ 24ರಂದು ಆರಂಭಗೊಂಡು ಜುಲೈ 03ಕ್ಕೆ ಮುಕ್ತಾಯವಾಗಲಿದೆ ಎಂದು ಕೇಂದ್ರ ಸಚಿವ ಕಿರಣ್​ ರಿಜುಜು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿರುವ ಅವರು, 9 ದಿನಗಳ ವಿಶೇಷ ಅಧಿವೇಶನದಲ್ಲಿ ಲೋಕಸಭೆಯ ಸ್ಪೀಕರ್​ಅನ್ನು ಆಯ್ಕೆ ಮಾಡಲಾಗುತ್ತದೆ. ನೂತನವಾಗಿ ಆಯ್ಕೆಯಾಗಿರುವ ಸಂಸದರು ಪ್ರಮಾಣವಚನ ಸ್ವೀಕರಿಸುತ್ತಾರೆ. ರಾಜ್ಯಸಭಾ ಅಧಿವೇಶನವು ಜೂನ್​ 26ರಂದು ಆರಂಭಗೊಂಡು ಜುಲೈ 03ಕ್ಕೆ ಕೊನೆಯಾಗಲಿದೆ. ಅಧಿವೇಶನದ ಮೊಲದ ದಿನ ರಾಷ್ಟ್ರಪತಿ ದ್ರೌಪರಿ ಮುರ್ಮು ಉಭಯ ಸದನಗಳನ್ನು ಉದ್ಧೇಶಿಸಿ ಮಾತನಾಡಿಲಿದ್ದಾರೆ ಎಂದು ತಿಳಿಸಿದ್ದಾರೆ.
ಸದ್ಯ ಕೇಳಿ ಬಂದಿರುವ ಮಾಹಿತಿ ಪ್ರಕಾರ ಏಳನೇ ಬಾರಿಗೆ ಸಂಸತ್​ಗೆ ಆಯ್ಕೆಯಾಗಿರುವ ಬಿಜೆಪಿ ಸಂಸದ ರಾಧಾ ಮೋಹನ್​ ದಾಸ್​ ಸ್ಪೀಕರ್​ ಆಗಿ ಆಯ್ಕೆಯಾಗಬಹುದು ಎಂದು ಹೇಳಲಾಗಿದೆ. ಜುಲೈ 3 ರಂದು ಆರ್ಥಿಕ ಸಮೀಕ್ಷೆಯನ್ನು ಮಂಡಿಸುವ ಸಾಧ್ಯತೆ ಕೂಡ ಇದೆ. ಜುಲೈ 22 ರಂದು ಪೂರ್ಣ ಪ್ರಮಾಣದ ಕೇಂದ್ರದ ಬಜೆಟ್ ಮಂಡನೆಯಾಗುವ ನಿರೀಕ್ಷೆಯಿದೆ. ಫೆಬ್ರವರಿ 1ರಂದು ಬೇಸಿಗೆಯಲ್ಲಿ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಮಧ್ಯಂತರ ಬಜೆಟ್ ಅನ್ನು ಮಂಡಿಸಲಾಗಿತ್ತು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:four × 2 =
Remember me
