ಜೈಪುರ:ಆಘಾತಕಾರಿ ಘಟನೆಯೊಂದರಲ್ಲಿ ದಲಿತ ಸಮುದಾಯಕ್ಕೆ ಸೇರಿದ 19 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಬಳಿಕ ಆಕೆಯ ಮೇಲೆ ಆ್ಯಸಿಡ್​ ಸುರಿದು ಬರ್ಬರವಾಗಿ ಹತ್ಯೆ ಮಾಡಿರುವ ಪ್ರಕರಣವು ರಾಜಸ್ಥಾನದ ಕರೌಲಿ ಜಿಲ್ಲೆಯ ನಡೌಟಿ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಯುವತಿಯನ್ನು ಹತ್ಯೆ ಮಾಡಿದ ಬಳಿಕ ಆಕೆಯ ಶವವನ್ನು ಬಾವಿಯಲ್ಲಿ ಎಸೆದು ದುರುಳರು ಪರಾರಿಯಾಗಿದ್ದಾರೆ. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡ ಒಂದನ್ನು ರಚಿಸಲಾಗಿದ್ದು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ನಡೌಟಿ ಪೊಲೀಸ್​ ಠಾಣಾಧಿಕಾರಿ ಬಾಬುಲಾಲ್​ ಬೆಳಗ್ಗೆ 9 ಘಂಟೆ ಸುಮಾರಿಗೆ ಬಿಲಪದ ರಸ್ತೆಯಲ್ಲಿರುವ ಬಾವಿಯೊಂದರಲ್ಲಿ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿರುವುದಾಗಿ ನಮಗೆ ಕರೆ ಬಂತು. ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದಾಗ ಮೃತ ಯುವತಿಯು 19 ವರ್ಷ ವಯಸ್ಸಿನವಳಾಗಿದ್ದು, ಕರೌಲಿ ಜಿಲ್ಲೆಯ ಬಾಲ್​ಘಾಟ್​ ಪೊಲೀಸ್​ ಠಾಣೆ ವ್ಯಾಪ್ತಿಯ ಮೋಹನ್​ಪುರ ನಿವಾಸಿ ಎಂದು ತಿಳಿದು ಬಂದಿದೆ.
#WATCH| Karauli, Rajasthan | A 19-year-old Dalit girl was allegedly gang-raped and murdered; acid was thrown at her face after the gangrape. Body found in a well on Bhilapada road under Nadauti police station limits.Babulal, Police Officer Nadoti says, "We got information…pic.twitter.com/RtB4tWjXZc
ಇದನ್ನೂ ಓದಿ:ಟೊಮ್ಯಾಟೋ ಆಯ್ತು ಈಗ ಮೊಟ್ಟೆ ಸರದಿ; ಸಾಮಗ್ರಿ ತುಂಬಿದ್ದ ಲಾರಿ ದೋಚಿದ ಖದೀಮರು
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದರ ವರದಿ ಬಂದ ನಂತರ ಮುಂದಿನ ಕ್ರಮಕೈಗೊಳ್ಳಲಾಗುವುದು. ಸಾಮೂಹಿಕ ಅತ್ಯಾಚಾರ ಎಸಗಿದ ಬಳಿಕ ಯುವತಿಯನ್ನು ಹತ್ಯೆ ಮಾಡಲಾಗಿದ್ದು, ಆರೋಪಿಗಳು ಆಕೆಯ ಮೃತದೇಹದ ಮೇಲೆ ಆ್ಯಸಿಡ್​ ಎರಚಿ ಸಾಕ್ಷ್ಯನಾಶ ಮಾಡಲು ಯತ್ನಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ಶೀಘ್ರದಲ್ಲೇ ತಪ್ಪಿತಸ್ಥರನ್ನು ಬಂಧಿಸಲಾಗುವುದೆಂದು ನಡೌಟಿ ಪೊಲೀಸ್​ ಠಾಣಾಧಿಕಾರಿ ಬಾಬುಲಾಲ್​ ತಿಳಿಸಿದ್ದಾರೆ.
ತಮ್ಮ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವುದನ್ನು ಖಂಡಿಸಿ ಯುವತಿ ಕುಟುಂಬಸ್ಥರು ಜಿಲ್ಲಾಸ್ಪತ್ರೆ ಮುಂಭಾಗ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದರು. ಆರೋಪಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸುವವರೆಗೂ ಶವವನ್ನು ಮರಣೋತ್ತರ ಪರೀಕ್ಷೆಗೆ ಕೊಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು.
ಪ್ರತಿಭಟನೆಯ ವಿಚಾರ ತಿಳಿದು ಸ್ಥಳಕ್ಕೆ ದೌಡಾಯಿಸಿದ ಹಿರಿಯ ಅಧಿಕಾರಿಗಳು ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಭರವಸೆ ನೀಡಿದ ಬಳಿಕ ಶವವನ್ನು ಮರಣೊತ್ತರ ಪರೀಕ್ಷೆಗೆ ಕೊಡಲು ಒಪ್ಪಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:5 × four =
Remember me
