ಆಲಿಗಢ:ISIS ಉಗ್ರಗಾಮಿ ಸಂಘಟನೆಯೊಂದಿಗೆ ನಿಕಟ ಸಂಪರ್ಕ ಹೊಂದಿದ ಆರೋಪದ ಮೇಲೆ ರಾಷ್ಟ್ರೀಯ ತನಿಖಾ ದಳ(NIA) ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿದೆ.
ಬಂಧಿತನನ್ನು ಜಾರ್ಖಂಡ್​ ಮೂಲದ ಫೈಜಾನ್​ ಅನ್ಸಾರಿ ಅಲಿಯಾಸ್​ ಫೈಜ್​(19) ಎಂದು ಗುರುತಿಸಲಾಗಿದ್ದು, ಈತ ISIS ಜತೆಯಾಗಿ ದೇಶದಲ್ಲಿ ವಿದ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ.
ಇದನ್ನೂ ಓದಿ:ನೈಸರ್ಗಿಕ ಅನಿಲಕ್ಕಾಗಿ 10 ಸಾವಿರ ಅಡಿ​ ಭೂಮಿ ಕೊರೆಯಲು ಮುಂದಾದ ಚೀನಾ
ಫೈಜಾನ್​ ಸಾಮಾಜಿಕ ಜಾಲತಾಣದ ಮೂಲಕ ಐಸಿಸ್​ನೊಂದಿಗೆ ಸಂಪರ್ಕ ಬೆಳೆಸಿದ್ದ. ಈ ಕುರಿತು ಮಾಹಿತಿ ಪಡೆದ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಆತನ ಬಾಡಿಗೆ ಮನೆ ಹಾಗೂ ಜಾರ್ಖಂಡ್​ನ ಲೋಹರ್​ದಾಗ್​ನಲ್ಲಿರುವ ಸ್ವಗೃಹದ ಮೇಲೆ ದಾಳಿ ನಡೆಸಿ ಎಲೆಕ್ಟ್ರಾನಿಕ್​ ಉಪಕರಣಗಳನ್ನು ವಶಕ್ಕೆ ಪಡೆದಿದ್ದರು.
ವಶಪಡಿಸಿಕೊಂಡ ವಸ್ತುಗಳನ್ನು ಪರಿಶೀಲಿಸಿದಾಗ ಆರೋಪಿಯೂ ಐಸಿಸ್​ ಜೊತೆ ನಿರಂತರ ಸಂಪರ್ಕ ಹೊಂದಿದ್ದ ಮತ್ತು ಭಾರತದಲ್ಲಿ ವಿದ್ವಂಸಕ ಕೃತ್ಯ ಎಸಗಲು ಯುವಕರನ್ನು ನೇಮಕ ಮಾಡಿಕೊಳ್ಳುವ ಜವಾಬ್ದಾರಿಯನ್ನು ಸಹ ಹೊತ್ತಿದ್ದ. ಖಚಿತ ಮಾಹಿತಿ ಮೇರೆಗೆ ಈತನನ್ನು ಬಂಧಿಸಲಾಗಿದ್ದು ಶೀಘ್ರದಲ್ಲೇ ಶಂಕಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಚಾರ್ಜ್​ಶೀಟ್​ ಸಲ್ಲಿಸಲಾಗುವುದು ಎಂದು NIAನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × three =
Remember me
