ಬೆಂಗಳೂರು:ಹಳೇ ವೈಷಮ್ಯದ ಹಿನ್ನಲೆಯಲ್ಲಿ ನೇಪಾಳ ಮೂಲದ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ಕಸವನಹಳ್ಳಿಯಲ್ಲಿ ನಡೆದಿದೆ.
ಮೃತರನ್ನು ಡೇವಿಡ್​ ಅಲಿಯಾವ್​ ಪಾರಸ್​(19) ಎಂದು ಗುರತಿಸಲಾಗಿದ್ದು, ಬೆಳ್ಳಂದೂರು ಬಳಿ ಇರುವ ಹರಳೂರಿನಲ್ಲಿ ಅವರ ಸಹೋದರನ ಜೊತೆ ವಾಸಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಘಟನೆಯೂ ಜೂನ್​ 24 ಶನಿವಾರ ರಾತ್ರಿ 9:30ರ ಸುಮಾರಿಗೆ ನಡೆದಿದ್ದು, ಡೇವಿಡ್​ ಕಸವನಹಳ್ಳಿ ಬಳಿ ಇರುವ ಬೇಕರಿ ಒಂದರ ಬಳಿ ನಿಂತಿದ್ದರು. ಈ ವೇಳೆ ಆಗಮಿಸಿ ಮೂವರು ದುಷ್ಕರ್ಮಿಗಳು ಡೇವಿಡ್​ ಜೊತೆ ಜಗಳ ತೆಗೆದಿದ್ದು, ಅವರ ಎದೆ ಹಾಗೂ ಹೊಟ್ಟೆ ಭಾಗಕ್ಕೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ.
ಇದನ್ನೂ ಓದಿ:ವಿಪಕ್ಷ ನಾಯಕನಾಗಲು ಯೋಗ್ಯತೆ ಇರುವ ಒಂದೇ ಒಂದು ಮನುಷ್ಯಾಕೃತಿಯೂ ಬಿಜೆಪಿಯಲ್ಲಿಲ್ಲ: ಕಾಂಗ್ರೆಸ್​
ಚಾಕು ಇರಿತದಿಂದ ತೀವ್ರವಾಗಿ ಗಾಯಗೊಂಡಿದ್ದನ್ನು ಗಮನಿಸಿದ ಸ್ಥಳೀಯರೊಬ್ಬರು ಅವರನ್ನು ಆಸ್ಪತ್ರೆಗೆ ಸೇರಿಸಿದ್ಧಾರೆ. ತೀವ್ರ ರಕ್ತಸ್ರಾವ ಆಗಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ಧಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್​ ಅಧಿಕಾರಿಯೊಬ್ಬರು ಹಳೇ ವೈಷಮ್ಯದ ಹಿನ್ನಲೆಯಲ್ಲಿ ಡೇವಿಡ್​ನನ್ನು ಕೊಲೆ ಮಾಡಲಾಗಿದೆ. ಒಂದು ತಿಂಗಳ ಹಿಂದೆ ಆತ ಚೈನೀಸ್​ ರೆಸ್ಟೋರೆಂಟ್​ನಲ್ಲಿ ಅಸಿಸ್ಟೆಂಟ್​ ಕುಕ್​ ಆಘಿ ಕಾರ್ಯ ನಿರ್ವಹಿಸುತ್ತಿದ್ದ. ಆದರೆ, ಕಾರಣಾಂತರಗಳಿಂದ ಕೆಲಸ ಬಿಟ್ಟಿದ್ದ. ಹತ್ಯೆ ಮಾಡಿರುವ ಆರೋಪಿಗಳು ಡೇವಿಡ್​ ಈ ಹಿಂದೆ ಕೆಲಸ ಮಾಡುತ್ತಿದ್ದ ಹೋಟೆಲ್​ ಸಿಬ್ಬಂದಿ ಆಗಿರಬಹುದು ಎಂದು ಭಾವಿಸಿದ್ದೇವೆ.
ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಘಟನೆ ನಡೆದ ಪ್ರದೇಶದ ಸುತ್ತ ಇರುವ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸಲಾಗಿದೆ. ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + ten =
Remember me
