ಹೈದರಾಬಾದ್​:ಆಘಾತಕಾರಿ ಘಟನೆಯೊಂದರಲ್ಲಿ 19 ವರ್ಷದ ಯುವತಿಯ ಕತ್ತು ಸೀಳಿ, ಸ್ಕ್ರೂಡ್ರೈವರ್‌ನಿಂದ ಕಣ್ಣಿಗೆ ಚುಚ್ಚಿ ಕೊಲೆ ಮಾಡಿರುವ ಘಟನೆ ತೆಲಂಗಾಣದ ವಿಕಾರಬಾದ್​ ಜಿಲ್ಲೆಯಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಜುಟ್ಟು ಸಿರಿಷಾ(19) ಎಂದು ಗುರುತಿಸಲಾಗಿದ್ದು, ಘಟನೆಯೂ ವಿಕಾರಬಾದ್​ ಜಿಲ್ಲೆಯ ಕಾಲಾಪುರ ಗ್ರಾಮದಲ್ಲಿ ನಡೆದಿದೆ.
ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಪೊಲೀಸ್​ ಅಧಿಕಾರಿ ಒಬ್ಬರು ಮೃತ ಯುವತಿ ಸಿರಿಷಾ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು. ಶನಿವಾರ ರಾತ್ರಿ 11:00 ಘಂಟೆ ಸುಮಾರಿಗೆ ಯಾರಿಗೂ ತಿಳಿಸದೆ ಮನೆ ಬಿಟ್ಟು ಬಂದಿದ್ದಾಳೆ.
ಇದನ್ನೂ ಓದಿ:ಧಾರ್ಮಿಕ ಕಟ್ಟುಪಾಡುಗಳನ್ನು ಮೀರಿ ಅಂಗಾಂಗ ದಾನ ಮಾಡಿದ ಮುಸ್ಲಿಂ ಕುಟುಂಬವನ್ನು ಸನ್ಮಾನಿಸಿದ ಸಚಿವ ದಿನೇಶ್​ ಗುಂಡೂರಾವ್
ಮಗಳು ಮನೆ ಬಿಟ್ಟು ಹೋಗಿರುವ ವಿಚಾರ ತಿಳಿದ ಆಕೆಯ ತಂದೆ ಗ್ರಾಮದ ಸುತ್ತಮುತ್ತ ಹಾಗೂ ಬಂಧು ಬಳಗದವರ ಬಳಿ ವಿಚಾರಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಮಾರನೇ ದಿನದ ಬೆಳಗ್ಗೆ ಗ್ರಾಮಸ್ಥರು ಯುವತಿಯ ಶವ ಹೊಂಡದಲ್ಲಿ ತೇಲುತ್ತಿರುವುದನ್ನು ನೋಡಿ ಸಿರಿಷಾ ಪೋಷಕರಿಗೆ ಹಾಗೂ ಪೊಲೀಸರಿಗೆ ತಿಳಿಸಿದ್ದಾರೆ.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಯುವತಿಗೆ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು ಶೀಘ್ರದಲ್ಲೇ ತಪ್ಪಿತಸ್ಥರನ್ನು ಬಂಧಿಸಲಾಗುವುದು ಎಂದು ಸ್ಥಳೀಯ ಪೊಲೀಸ್​ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 3 =
Remember me
