ಶ್ರೀನಗರ:ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಯೋಧರಿಬ್ಬರ ಜತೆಗೆ ಒಬ್ಬ ಪೊಲೀಸ್ ಕೂಡ ಹುತಾತ್ಮರಾಗಿರುವ ಪ್ರಕರಣ ನಡೆದಿದೆ. ಜಮ್ಮು-ಕಾಶ್ಮೀರದ ಅನಂತ್​ನಾಗ್​ ಜಿಲ್ಲೆಯಲ್ಲಿ ಈ ದುರ್ಘಟನೆ ನಡೆದಿದೆ.
ಯೋಧರಾದ ಕರ್ನಲ್ ಮನ್​ಪ್ರೀತ್ ಸಿಂಗ್ ಹಾಗೂ ಮೇಜರ್ ಆಶಿಸ್​ ಧೊಂಚಕ್ ಮತ್ತು ಡಿವೈಎಸ್​ಪಿ ಹಿಮಾನ್ಯುಂ ಮುಜಾಮಿಲ್ ಭಟ್ ಹುತಾತ್ಮರಾದವರು. ಮನ್​ಪ್ರೀತ್ ಸಿಂಗ್ ರಾಜಸ್ಥಾನ್​ ರೈಫಲ್ಸ್ ಸಂಘಟನೆಯ ಕಮಾಂಡಿಂಗ್ ಆಫೀಸರ್.
ಅನಂತ್​ನಾಗ್​ನ ದಟ್ಟ ಕಾಡಿನಲ್ಲಿ ಉಗ್ರರ ಗುಂಡಿನ ದಾಳಿಯ ನಡುವೆಯೂ ಪೊಲೀಸ್ ಅಧಿಕಾರಿಯ ಶವವನ್ನು ಸುಪರ್ದಿಗೆ ತೆಗೆದುಕೊಳ್ಳಲಾಗಿದೆ. ಉಗ್ರರ ನುಸುಳಿರುವ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ನಿನ್ನೆ ರಾತ್ರಿ ಸೇನೆ ಮತ್ತು ಸ್ಥಳೀಯ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆಗೆ ಮುಂದಾಗಿದ್ದರು. ಈ ಕಾರ್ಯಾಚರಣೆಯಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ. ಇನ್ನೊಂದೆಡೆ ಇಬ್ಬರು ಉಗ್ರರು ಕೂಡ ಹತರಾಗಿದ್ದು, ಕಾರ್ಯಾಚರಣೆ ಮುಂದುವರಿದಿದೆ.
ಬಿಎಂಟಿಸಿ ಬಸ್​ನಲ್ಲಿ ಸಂಚರಿಸಿದ ಖ್ಯಾತ ಕ್ರಿಕೆಟಿಗ ಅನಿಲ್ ಕುಂಬ್ಳೆ; ಪೊಲೀಸ್ ಕಮಿನಷರ್ ಪ್ರತಿಕ್ರಿಯೆ ಹೀಗಿತ್ತು..

ಸಿಸಿಬಿ ಪೊಲೀಸರು, ನ್ಯಾಯಾಧೀಶರ ಮುಂದೆಯೂ ಕಣ್ಣೀರಿಟ್ಟ ಚೈತ್ರಾ ಕುಂದಾಪುರ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 − 16 =
Remember me
