ಹೈದರಾಬಾದ್​:ಗುದನಾಳದಲ್ಲಿ 1 ಕೋಟಿ ರೂ. ಮೌಲ್ಯದ 1705.3 ಗ್ರಾಂ ಚಿನ್ನವನ್ನು ಸಾಗಿಸುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಹೈದರಾಬಾದ್​ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್​ ಇಲಾಖೆ ವ್ಯಾಪ್ತಿಗೆ ಒಳಪಡುವ ಏರ್​ ಇಂಟಲಿಜೆನ್ಸ್​ ಯೂನಿಟ್​(AIU) ಅಧಿಕಾರಿಗಳು ವಶಕ್ಕೆ ಪಡೆದಿದ್ಧಾರೆ.
ಖಚಿತ ಮಾಹಿತಿ ಮೇರೆಗೆ ಆರೋಪಿಗಳಿಬ್ಬರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಕಸ್ಟಮ್ಸ್​ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ಸೋಮವಾರು ರಾತ್ರಿ 10:30ರ ಸುಮಾರಿಗೆ ಡುಬೈ ನಿಂದ ಇಂಡಿಗೋ ವಿಮಾನ 6E-1484ನಲ್ಲಿ ಹೂದರಾಬಾದಿಗೆ ಬಂದಿಳಿದ ಇಬ್ಬರು ಪ್ರಯಾಣಿಕರನ್ನು ಏರ್​ ಇಂಟಲಿಜೆನ್ಸ್​ ಯೂನಿಟ್ ಅಧಿಕಾರಿಗಳು ತಡೆದು ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಬಿಲ್​ ಶೇರ್​ ಮಾಡುವಂತೆ ಹೇಳಿದ್ದಕ್ಕೆ ಸಿಟ್ಟು; ಜನುಮದಿನದಂದೇ ಸಿನಿಮೀಯ ಶೈಲಿಯಲ್ಲಿ ಯುವಕನ ಹತ್ಯೆ
ಪರಿಶೀಲನೆ ವೇಳೆ ಇಬ್ಬರು ಪ್ರಯಾಣಿಕರು ತಮ್ಮ ಗುದನಾಳದಲ್ಲಿ ಕಪ್ಪು ಟೇಪ್​ ಸುತ್ತಿದ ಚಿನ್ನದ ಪೇಸ್ಟ್​ ಲೇಪಿತ ಆರು ಕ್ಯಾಪ್ಸ್ಯೂಲ್​ ಇರುವುದು ಪತ್ತೆಯಾಗಿದೆ. ಬಂಧಿತರಿಂದ 1 ಕೋಟಿ ರೂ. ಮೌಲ್ಯದ 1705.3 ಗ್ರಾಂ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ.
ಈ ಇಬ್ಬರು ಪ್ರಯಾಣಿಕರನ್ನು ಕಸ್ಟಮ್ಸ್​ ಆ್ಯಕ್ಟ್​ 1962ರ ಅಡಿಯಲ್ಲಿ ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿ ಒಬ್ಬರು ತಿಳಿಸಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:2 × 1 =
Remember me
