ಚೆನ್ನೈ:ಎರಡು ಖಾಸಗಿ ಬಸ್​ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟು, 70ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ನಡೆದಿದೆ.
ಕಡಲೂರು ಜಿಲ್ಲೆಯ ನೆಲ್ಲಿಕುಪ್ಪಂ ಬಳಿಯ ಪಟ್ಟಂಬಾಕ್ಕಂನಲ್ಲಿ ಈ ದುರ್ಘಟನೆ ಸಂಭವಿಸಿದೆ. ಬಸ್​ನ ಮುಂಭಾಗದ ಟೈರ್​ ಬರ್ಸ್ಟ್​ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಎದುರು ಬರುತ್ತಿದ್ದ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದಿದೆ.
ಎರಡು ಖಾಸಗಿ ಬಸ್‌ಗಳು ಕಡಲೂರು ಮತ್ತು ಪನ್ರುತಿ ನಡುವೆ ಸಂಚರಿಸುತ್ತಿದ್ದವು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಕಡಲೂರಿನಲ್ಲಿರುವ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಕುಟುಂಬಗಳಿಗೆ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್​ 2 ಲಕ್ಷ ರೂ., ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ.
ಇದನ್ನೂ ಓದಿ:ಸೀತೆ ಕುರಿತ ಸಂಭಾಷಣೆ; ಆದಿಪುರುಷ್​ ಸೇರಿದಂತೆ ಭಾರತೀಯ ಚಲನಚಿತ್ರಗಳು ಕಠ್ಮಂಡುವಿನಲ್ಲಿ ಬ್ಯಾನ್​
#WATCH| Tamil Nadu | Around 70 people injured in a collision between two private buses in Melpattampakkam of Cuddalore district. The injured have been taken to Cuddalore government hospital. Further details awaited.pic.twitter.com/TX9H5pA1AF
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
