ರಾಯ್‌ಪುರ:ಛತ್ತೀಸ್‌ಗಢದ ಬಲರಾಮಪುರ ಜಿಲ್ಲೆಯಲ್ಲಿ ಮಿನಿ ಗೂಡ್ಸ್​ ವಾಹನವೊಂದು ಕಣಿವೆಗೆ ಉರುಳಿ ಛತ್ತೀಸ್‌ಗಢ ಸಶಸ್ತ್ರ ಪಡೆ (ಸಿಎಎಫ್) ಇಬ್ಬರು ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಸಾರ್ವಜನಿಕ ಸ್ಥಳಗಳಲ್ಲಿ ಅವಧಿ ಮೀರಿದ ವಾಹನಗಳು ಕಂಡರೆ ವಶಕ್ಕೆ ಪಡೆಯಲು ದೆಹಲಿ ಸರ್ಕಾರ ಆದೇಶ!
ವಾಹನವು ಕಡಿದಾದ ತಿರುವಿನಲ್ಲಿ ಚಲಿಸುವಾಗ ಚಾಲಕನ ನಿಯಂತ್ರಣ ತಪ್ಪಿ ಆಳವಾದ ಕಣಿವೆಗೆ ಉರುಳಿದೆ. ಈ ವೇಳೆ ಕಾನ್​ಸ್ಟೆಬಲ್​ಗಳಾದ ಉತ್ತರ ಪ್ರದೇಶದ ನಿವಾಸಿ, ಹೆಡ್ ಕಾನ್‌ಸ್ಟೆಬಲ್ ಫತೇಹ್ ಬಹದ್ದೂರ್ ಮತ್ತು ಛತ್ತೀಸ್‌ಗಢದ ಸುರ್ಗುಜಾ ಜಿಲ್ಲೆಯ ನಾರಾಯಣ ಪ್ರಸಾದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ವಾಹನದಲ್ಲಿದ್ದ ಮತ್ತೊಬ್ಬ ಕಾನ್​ಸ್ಟೇಬಲ್​ ರಾಪ್ರತಾಪ್ ಸಿಂಗ್ ಹಾಗೂ ವಾಹನ ಚಾಲಕನಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಲರಾಮ್‌ಪುರ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಲಾಲ್ ಉಮೇದ್ ಸಿಂಗ್ ಹೇಳಿದ್ದಾರೆ.
ಸಿಎಎಫ್‌ನ 10ನೇ ಬೆಟಾಲಿಯನ್‌ನ ‘ಡಿ’ ಕಂಪನಿಯನ್ನು ರಾಮಚಂದ್ರಾಪುರದಿಂದ ಪುಂಡಗ್‌ಗೆ ವರ್ಗಾಯಿಸಲಾಗಿದೆ ಎಂದು ಎಸ್‌ಪಿ ಸಿಂಗ್ ಹೇಳಿದ್ದಾರೆ. ಮರುನಿಯೋಜನೆಯ ಭಾಗವಾಗಿ ಹೊಸ ಶಿಬಿರದ ಸ್ಥಳಕ್ಕೆ ಬಸ್‌ಗಳು ಮತ್ತು ಟ್ರಕ್‌ಗಳಲ್ಲಿ ಭದ್ರತಾ ಸಿಬ್ಬಂದಿ, ಸರಕುಗಳು ಮತ್ತು ಇತರ ವಸ್ತುಗಳನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ಅವರು ಹೇಳಿದರು.
ಜಮ್ಮು ಕಾಶ್ಮೀರದ ಬರಾಮುಲ್ಲಾ ಎನ್‌ಕೌಂಟರ್: ಹತ್ಯೆಗೀಡಾದ ಉಗ್ರರಿಗೂ ಎಲ್​ಇಟಿಗೂ ನಂಟು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
