ಭೋಪಾಲ್:ಗಣೇಶನ ಮೆರವಣಿಗೆ ವೇಳೆ ವಿದ್ಯುತ್​ ತಂತಿ ತಗುಲಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಛಿಂದ್​ವಾರಾ ಜಿಲ್ಲೆಯ ತಾರಾ ಕಾಲೋನಿಯಲ್ಲಿ ನಡೆದಿದೆ.
ಮೃತರನ್ನು ರಾಹುಲ್​ ಠಾಕೂರ್​ (38), ಸಂಜಯ್​ ಚೌರೆ (22) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ 30 ವರ್ಷದ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಲಾಗುತ್ತಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಇದನ್ನೂ ಓದಿ:ಕಾವೇರಿ ಜಲವಿವಾದ; ಮಹತ್ವದ ಸಲಹೆ ಕೊಟ್ಟ ಸದ್ಗುರು
ಈ ಕುರಿತು ಪ್ರತಿಕ್ರಿಯಿಸಿರುವ ಛಿಂದ್​ವಾರಾ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿನಾಯಕ್​ ವರ್ಮಾ ಘಟನೆಯೂ ಶನಿವಾರ ರಾತ್ರಿ 9 ಘಂಟೆ ಸುಮಾರಿಗೆ ನಡೆದಿದ್ದು, ಗಣೇಶನ ಮೂರ್ತಿ ಇಡಲಾಗಿದ್ದ ಟ್ರ್ಯಾಕ್ಟರ್​ 11 ಸಾವಿರ ವೋಲ್ಟೇಜ್​ ಇರುವ ವಿದ್ಯುತ್​ ತಂತಿಗೆ ತಾಗಿದ ಪರಿಣಾಮ ದುರ್ಘಟನೆ ಸಂಭವಿಸಿದೆ.
ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದ್ದು, ವೈದ್ಯರು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡುತ್ತಿದ್ದಾರೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು ತನಿಖೆ ನಡೆಸಲಾಗುತ್ತಿದೆ ಎಂದು ಛಿಂದ್​ವಾರಾ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ವಿನಾಯಕ್​ ವರ್ಮಾ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
