ನವದೆಹಲಿ:ರಾಷ್ಟ್ರ ರಾಜಧಾನಿಯಲ್ಲಿ ಸೋಮವಾರ ರಾತ್ರಿ ಬಂಧಿತರಾಗಿರುವ ಜೈಷ್​ ಏ ಮೊಹಮ್ಮದ್ ಸಂಘಟನೆಯ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಶುಕ್ರವಾರ ಪಟಿಯಾಲಾ ಕೋರ್ಟ್​ಗೆ ಹಾಜರುಪಡಿಸಿದ್ದಾರೆ. ಕೋರ್ಟ್ ಅವರನ್ನು 5 ದಿನಗಳ ಪೊಲೀಸ್ ರಿಮಾಂಡ್​ಗೆ ಒಪ್ಪಿಸಿದೆ.
ಇಬ್ಬರು ಉಗ್ರರ ಫೋನ್ ಕರೆಗಳ ದಾಖಲೆಗಳನ್ನು ಪರಿಶೋಧಿಸಿದಾಗ ಮೂರನೇ ಉಗ್ರನೂ ದೆಹಲಿಯಲ್ಲಿ ಇರುವುದು ಖಚಿತವಾಗಿದೆ. ಆತನ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಎಂಬ ಅಂಶವನ್ನು ಕೋರ್ಟ್ ಗಮನಕ್ಕೆ ತರಲಾಗಿದೆ. ಕೂಡಲೇ ಬಂಧಿತ ಉಗ್ರರನ್ನು ಹೆಚ್ಚಿನ ವಿಚಾರಣೆಗಾಗಿ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಬಿಡುವಂತೆ ಕೋರ್ಟ್​ ನಿರ್ದೇಶನ ನೀಡಿದೆ.
ಇದನ್ನೂ ಓದಿ:ಪ್ರತಾಪಗಢ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ- ಆರು ಮಕ್ಕಳು ಸೇರಿ 14 ಜನ ಸಾವು
ಸೋಮವಾರ ದೆಹಲಿಯ ಮಿಲೆನಿಯಮ್ ಪಾರ್ಕ್​ ಸಮೀಪ ಲತೀಫ್ ಮತ್ತು ಅಶ್ರಫ್ ಎಂಬ ಇಬ್ಬರು ಶಂಕಿತ ಉಗ್ರರನ್ನು ಪೊಲೀಸರು ಬಂಧಿಸಿದ್ದರು. ದೆಹಲಿಯಲ್ಲಿ ವಿಧ್ವಂಸಕ ಕೃತ್ಯ ಎಸಗಿದ ಬಳಿಕ ಪಾಕಿಸ್ತಾನಕ್ಕೆ ತೆರಳಿ ತಲೆಮರೆಸಿಕೊಳ್ಳುವ ಯೋಜನೆ ಹಾಕಿಕೊಂಡಿದ್ದರು. ಲತೀಫ್​ ಬಾರಾಮುಲ್ಲಾ ಜಿಲ್ಲೆಯವನಾದರೆ, ಅಶ್ರಫ್​ ಕುಪ್ವಾರಾ ಜಿಲ್ಲೆಯವನು. (ಏಜೆನ್ಸೀಸ್)
ಚಿನ್ನ ಕಳ್ಳಸಾಗಣೆ ಕೇಸ್: ಕೇರಳದ ಐದು ಕಡೆ ಎನ್​ಐಎ ಶೋಧ ಕಾರ್ಯಾಚರಣೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − one =
Remember me
