ಜೋಧಪುರ:ಅಟ್ಟಾಡಿಸಿಕೊಂಡು ಬಂದಿದ್ದ ನಾಯಿಗಳಿಂದ ತಪ್ಪಿಸಿಕೊಳ್ಳಲು ಓಡುತ್ತಿದ್ದ ಸಮಯದಲ್ಲಿ ಗೂಡ್ಸ್ ರೈಲಿಗೆ ಸಿಲುಕಿ ಇಬ್ಬರು ಶಾಲಾ ಮಕ್ಕಳು ಮೃತಪಟ್ಟಿರುವ ಘಟನೆ ಇಲ್ಲಿನ ಬನಾರ್‌ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಅನನ್ಯ ಕನ್ವರ್ (9) ಮತ್ತು ಯುವರಾಜ್ ಸಿಂಗ್ (11) ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಚಂದ್ರನ ಮೇಲೆ ಇಳಿದ ಐದನೇ ದೇಶ ಜಪಾನ್…SLIM ಲ್ಯಾಂಡರ್‌ ಸಾಫ್ಟ್ ಲ್ಯಾಂಡಿಂಗ್ ಯಶಸ್ವಿ
ಮೃತ ಮಕ್ಕಳು ಬನಾರ್ ಪ್ರದೇಶದ ಗಣೇಶಪುರ ನಿವಾಸಿಗಳಾಗಿದ್ದು, ಆರ್ಮಿ ಚಿಲ್ಡ್ರನ್ ಅಕಾಡೆಮಿಯಲ್ಲಿ 5 ಮತ್ತು 7 ನೇ ತರಗತಿಯಲ್ಲಿ ಓದುತ್ತಿದ್ದಾರೆ. ಸೋದರ ಸಂಬಂಧಿಗಳಾದ ಇಬ್ಬರು ಮಕ್ಕಳು ಶಾಲೆಯಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ ಮಾರ್ಗ ಮಧ್ಯೆ ಸಾಕು ನಾಯಿಗಳು ಅಟ್ಟಿಸಿಕೊಂಡು ಬಂದಿದ್ದವು ಎಂದು ಪೊಲೀಸರು ತಿಳಿಸಿದ್ದಾರೆ.
ಭಯಭೀತರಾದ ಮಕ್ಕಳು ನಾಯಿಗಳಿಂದ ತಪ್ಪಿಸಿಕೊಳ್ಳಲು ಓಡಲು ಪ್ರಾರಂಭಿಸಿದ್ದರು. ಆದರೆ, ಈ ವೇಳೆ ರೈಲು ಬರುವುದನ್ನು ಗಮನಿಸದೆ ಅವರು ರೈಲ್ವೆ ಹಳಿಗಳ ಮೇಲೆ ಪ್ರವೇಶಿಸಿದ್ದಾರೆ, ಕೆಲವೇ ಕ್ಷಣಗಳಲ್ಲಿ ಗೂಡ್ಸ್​​ ರೈಲು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮಕ್ಕಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸ್ಥಳದಲ್ಲಿ ಮೃತರ ಪೋಷಕರು ಮತ್ತು ಸ್ಥಳೀಯರು ಪ್ರತಿಭಟನೆ ನಡೆಸಿದ್ದಾರೆ. ನಾಯಿಗಳನ್ನು ಹಿಡಿಯುವವರೆಗೂ ಶವ ಪಡೆಯುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಕೆಲ ಸಮಯದಲ್ಲೇ ಜೋಧಪುರ ನಗರಸಭೆಯ ಶ್ವಾನದಳದ ಸಿಬ್ಬಂದಿ ನಾಯಿಗಳನ್ನು ಹಿಡಿದಿದ್ದಾರೆ. ನಾಯಿ ಮಾಲೀಕರ ವಿರುದ್ಧ ಅಗತ್ಯ ಕ್ರಮ ಜರುಗಿಸುವಂತೆ ಆಗ್ರಹಿಸಿದರು.
ರಶ್ಮಿಕಾ ಜೊತೆ ಮದುವೆ: ವಿಜಯ್ ದೇವರಕೊಂಡ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + nine =
Remember me
