ಭೋಪಾಲ್​:ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಪರಿಣಾಮ ಇಬ್ಬರು ಮೃತಪಟ್ಟು, 20ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ನರ್​ಸಿಂಗ್​ಪುರ ಜಿಲ್ಲೆಯಲ್ಲಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 25ರಲ್ಲಿ ಘಟನೆ ನಡೆದಿದ್ದು, ಬಸ್​ ಮುಂಬದಿ ಬೈಕ್​ ಅಡ್ಡ ಬಂದ ಕಾರಣ ಅವಘಡ ಸಂಭವಿಸಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ರಿಜು ಭಾಫ್ನಾ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ.
कलेक्टर सुश्री@rijubafnaने ज़िला अस्पताल पहुँचकर सड़क दुर्घटना में घायलों के स्वास्थ्य की ली जानकारी।उन्होंने आज एक यात्री बस की खैरी नाका के निकट हुई सड़क दुर्घटना पर ज़िला चिकित्सालय में उपचाररत व्यक्तियों के समुचित इलाज के निर्देश चिकित्सकों को दिए।pic.twitter.com/81QSLxLTCo
ಇದನ್ನೂ ಓದಿ:VIDEO| ಮರಾಠಿ ಮೀಸಲಾತಿ ಹೋರಾಟ; ಪ್ರತಿಭಟನಾ ನಿರತರ ಮೇಲೆ ಲಾಠಿ ಚಾರ್ಜ್​ ಖಂಡಿಸಿ ತನ್ನ ಕಾರಿಗೆ ಬೆಂಕಿ ಹಚ್ಚಿದ ಸರ್​ಪಂಚ್​
44 ಪ್ರಯಾಣಿಕರಿದ್ದ ಬಸ್​ ನರ್​ಸಿಂಗ್​ಪುರದಿಂದ ಗದರ್ವಾರಾ ಪ್ರದೇಶಕ್ಕೆ ತೆರಳುತ್ತಿತ್ತು. ರಾಷ್ಟ್ರೀಯ ಹೆದ್ದಾರಿ 26 ಪ್ರವೇಶಿಸುತ್ತಿದ್ದಂತೆ ಬಸ್​ಗೆ ಬೈಕ್​ ಅಡ್ಡ ಬಂದಿದ್ದು, ಅಪಘಾತ ತಪ್ಪಿಸಲು ಹೋಗಿ ಚಾಲಕ ಸರ್ವೀಸ್​ ರೋಡ್​ನತ್ತ ತಿರುಗಿಸಿದ್ದಾನೆ. ಈ ವೇಳೆ ಬಸ್​ ಚಾಲಕ ನಿಯಂತ್ರಣ ತಪ್ಪಿದ್ದು, ಸ್ಕಿಡ್​ ಆಗಿ ಪಲ್ಟಿ ಹೊಡೆದಿದೆ.
ಘಟನೆಯಲ್ಲಿ ಪುಷ್ಪೇಂದ್ರ ವಿಶ್ವಕರ್ಮ(25) ಹಾಗೂ ದೇವೇಂದ್ರ ಜಾಥವ್​(05) ಮೃತಪಟ್ಟಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಕೊತ್ವಾಲಿ ಪೊಲೀಸ್​ ಠಾಣೆಯ ಅಧಿಕಾರಿ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × five =
Remember me
