ರಾಂಚಿ:ಸ್ಥಳೀಯ ಫುಟ್​ಬಾಲ್​ ಪಂದ್ಯದ ವೇಳೆ ಮೈದಾನಕ್ಕೆ ಸಿಡಿಲು ಬಡಿದ ಪರಿಣಾಮ ಇಬ್ಬರು ಪ್ರೇಕ್ಷಕರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾರ್ಖಂಡ್​ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ.
ಮೃತರನ್ನು ಶಿವಲಾಲ್ ಸೊರೇನ್​ (32), ಸಂತಲಾಲ್​ ಹೆಂಬ್​ರಾಮ್​ (20) ಮೃತ ದುರ್ದೈವಿಗಳೆಂದು ತಿಳಿದು ಬಂದಿದೆ. ಗಾಯಗೊಂಡಿರುವವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಮಣಿಪುರ ಹಿಂಸಾಚಾರ; ಇಬ್ಬರು ವಿದ್ಯಾರ್ಥಿಗಳ ಹತ್ಯೆ, ಇನ್ನೂ ಪತ್ತೆಯಾಗದ ಮೃತದೇಹ
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ಶನಿವಾರ ಸಂಜೆ ಫುಟ್​ಬಾಲ್​ ಪಂದ್ಯ ನಡೆಯುತ್ತಿದ್ದ ವೇಳೆ ಮಳೆ ಸುರಿದ ಪರಿಣಾಮ ಮೈದಾನದಲ್ಲಿದ್ದ ಪ್ರೇಕ್ಷಕರು ಆಶ್ರಯ ಪಡೆಯಲೆಂದು ಪಕ್ಕದ ಶೆಡ್​ ಒಂದಕ್ಕೆ ತೆರಳಿದ್ದಾರೆ. ಈ ವೇಳೆ ಸಿಡಿಲು ಬಡಿದಿದ್ದು, ಅದರ ಪರಿಣಾಮವಾಗಿ ಇಬ್ಬರು ಪ್ರೇಕ್ಷಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೂವರು ಪ್ರೇಕ್ಷಕರು ಗಂಭೀರವಾಗಿ ಗಾಯಗೊಂಡಿದ್ದು, ಈ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಸರೈಯಾಹತ್​ ಆಸ್ಪತ್ರೆಗೆ ದಾಖಲಿಸಿಲಾಗಿದ್ದು, ವೈದ್ಯರು ನಿಗಾ ವಹಿಸಿದ್ದಾರೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
