ರಾಜಗಢ:ಇಂದು (ಮಂಗಳವಾರ) ಬೆಳಿಗ್ಗೆ ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಲ್ಲಿ ಖಾಸಗಿ ಬಸ್‌ವೊಂದು ಫ್ಲೈಓವರ್‌ನಿಂದ ಬಿದ್ದು ಇಬ್ಬರು ಸಾವನ್ನಪ್ಪಿದ್ದು, 40 ಮಂದಿ ಗಾಯಗೊಂಡಿದ್ದಾರೆ ಗಾಯಗೊಂಡಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ:ಸಿಎಂ ಮಮತಾ ಕುರಿತ ಅನುಚಿತ ಹೇಳಿಕೆ: ಬಿಜೆಪಿಯ ಗಂಗೋಪಾಧ್ಯಾಯಗೆ 24 ಗಂಟೆ ಪ್ರಚಾರದಿಂದ ನಿಷೇಧ
ಬಸ್ ಶಿವಪುರಿ ಜಿಲ್ಲೆಯ ಪಿಚೋರ್ ಪಟ್ಟಣಕ್ಕೆ ತೆರಳುತ್ತಿದ್ದಾಗ ಮಧ್ಯರಾತ್ರಿ 1.30 ರ ಸುಮಾರಿಗೆ ಪಚೋರ್ ಪಟ್ಟಣದ ಬಳಿ ಚಾಲಕನ ನಿಯಂತ್ರಣ ತಪ್ಪಿ ಫ್ಲೈಓವರ್‌ನಿಂದ ಕೆಳಗೆ ಬಿದ್ದಿದೆ ಎಂದು ಪಚೋರ್ ಪೊಲೀಸ್ ಠಾಣೆಯ ಉಸ್ತುವಾರಿ ಆಕಾಂಶಾ ಶರ್ಮಾ ಹೇಳಿದ್ದಾರೆ.
ಮೃತರಲ್ಲಿ ಒಬ್ಬನನ್ನು ಹರ್ಜತ್ ಸಿಂಗ್ (28) ಎಂದು ಗುರುತಿಸಲಾಗಿದೆ. ಇನ್ನೊಬ್ಬನ್ನು ಇನ್ನು ಪತ್ತೆ ಹಚ್ಚಲಾಗಿದೆ. ಗಾಯಗೊಂಡವರಲ್ಲಿ 19 ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಇಂದೋರ್‌ಗೆ ಕಳುಹಿಸಲಾಗಿದೆ. ಉಳಿದವರು ಶಾಜಾಪುರ, ಬಯೋರಾ ಮತ್ತು ಪಚೋರ್‌ನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸ್​ ಅಧಿಕಾರಿ ತಿಳಿಸಿದ್ದಾರೆ.
ಇನ್ನು ಈ ಘಟನೆ ನಡೆದ ಸಮಯದಲ್ಲಿ ಚಾಲಕ ಮತ್ತು ಕಂಡಕ್ಟರ್‌ ಸ್ಥಳದಿಂದ ಪರಾರಿಯಾಗಿದ್ದಾರೆ. ಅವರನ್ನು ಪತ್ತೆ ಮಾಡಲು ಶೋಧ ಕಾರ್ಯ ನಡೆಯುತ್ತಿದೆ ಎಂದು ಹೇಳಲಾಗಿದೆ. ಇಬ್ಬರ ವಿರುದ್ಧವು ಪ್ರಕರಣ ದಾಖಲಿಸಲಾಗಿದೆ. ಬಸ್ ಚಾಲಕನ ನಿಯಂತ್ರಣ ತಪ್ಪಿ ವಾಹನ ಕೆಳಗಡೆ ನೆಲಕ್ಕೆ ಉರುಳಿ ಬಿದ್ದಿದೆ ಎಂದು ಪಚೋರ್ ಪೊಲೀಸ್ ಠಾಣೆಯ ಉಸ್ತುವಾರಿ ಆಕಾಂಶಾ ಶರ್ಮಾ ತಿಳಿಸಿದ್ದಾರೆ.
ಪೋಷಕರೇ ಎಚ್ಚರ!: ನೀರಿನ ಸಂಪ್‌ಗೆ ಬಿದ್ದು 5 ವರ್ಷದ ಬಾಲಕ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − four =
Remember me
