ಶಿಮ್ಲಾ:ಭೀಕರ ರಸ್ತೆ ಅಪಘಾತ ಒಂದರಲ್ಲಿ ತಿರುವು ತೆಗೆದುಕೊಳ್ಳುವ ವೇಳೆ ವೇಗವಾಗಿ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕಾರುಗಳ ಮೇಲೆ ಪಲ್ಟಿಯಾದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ನಡೆದಿದೆ.
ಅಪಘಾತವು ತಿಯೋಗ್​-ಚೈಲಾ ಹೆದ್ದಾರಿಯಲ್ಲಿ ಸಂಭವಿಸಿದೆ. ಘಟನೆಯಲ್ಲಿ 4-5 ಕಾರುಗಳು ಸಂಪೂರ್ಣವಾಗಿ ಜಖಂಗೊಂಂಡಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಪಘಾತದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ.
ವೈರಲ್​ ಆಗಿರುವ ವಿಡಿಯೋದಲ್ಲಿ ವೇಗವಾಗಿ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಕಾರುಗಳ ಮೇಲೆ ಪಲ್ಟಿಯಾಗುತ್ತಿರುವುದು ಕಂಡು ಬರುತ್ತದೆ. ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರುಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಅದರಿಂದ ವ್ಯಕ್ತಿಗಳಿಬ್ಬರು ಹೊರಬರುತ್ತಿರುವುದು ಕಂಡು ಬರುತ್ತದೆ. ಟ್ರಾಫಿಕ್​ ನಿಯಂತ್ರಿಸಲು ಪೊಲೀಸರನ್ನು ನಿಯೋಜಿಸಲಾಗಿತ್ತಾದರು ಅವರ ಕಣ್ಣೆಡುರಲ್ಲೇ ಈ ಘಟನೆ ನಡೆದಿರುವುದಕ್ಕೆ ಎಲ್ಲರೂ ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 3 =
Remember me
