ಪಶ್ಚಿಮ ಬಂಗಾಳ:ಪೊಲೀಸ್​ ಗಸ್ತುವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸಬ್​ಇನ್​ಸ್ಪೆಕ್ಟರ್​ ಸೇರಿದಂತೆ ಇಬ್ಬರು ಪೊಲೀಸರು ಸಾವನ್ನಪ್ಪಿದ್ದು, ಮೂವರು ತೀವ್ರ ಗಾಯಗೊಂಡಿರುವ ಘಟನೆ ಗುರುವಾರ ಮುಂಜಾನೆ ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ಬಗ್ನಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಬರುಂಡಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 16 ರಲ್ಲಿ ಸಂಭವಿಸಿದೆ.
ಮೃತರನ್ನು ಸಬ್ ಇನ್‌ಸ್ಪೆಕ್ಟರ್ ಸುಜೋಯ್ ದಾಸ್ (45) ಮತ್ತು ಹೋಮ್ ಗಾರ್ಡ್ ಪಲಾಶ್ ಸಮಂತ (31) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಚಾಲಕ ಅಬು ಬಕರ್ (28) ಮತ್ತು ಗೃಹ ರಕ್ಷಕ ದಳದ ಸುಖದೇಬ್ ಬಿಸ್ವಾಸ್ (25) ಮತ್ತು ಅಲೋಕ್ ಬಾರ್ (26) ಎಂದು ಗುರುತಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಕೋಲ್ಕತ್ತಾ ಮೂಲದ ಎಸ್‌ಎಸ್‌ಕೆಎಂ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಸ್ತೆ ಬದಿಯಲ್ಲಿ ನಿಂತಿದ್ದ ಪೊಲೀಸರ ಗಸ್ತು ತಿರುಗುವ ವಾಹನದ ಹಿಂಭಾಗಕ್ಕೆ ಕಾರು ಡಿಕ್ಕಿ ಹೊಡೆದೆದಿದೆ. ಈ ದುರ್ಘಟನೆ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಉನ್ನತ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಹೌರಾ ಎಸ್‌ಪಿ ಸ್ವಾತಿ ಭಂಗಾಲಿಯಾ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕುಂದಾಪುರ ಯುವಕನಿಗಾಗಿ ಜರ್ಮನಿಯಿಂದ ಬಂದಳು; ವಿದೇಶಿ ಪ್ರೀತಿಗೆ ಸ್ವದೇಶಿದಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆ

ನಾನು ರಾಮ ಭಕ್ತ, ರಾಮನನ್ನು ಪೂಜೆ ಮಾಡುತ್ತೇನೆ; ಮುಸ್ಲಿಂ ಕಾಂಗ್ರೆಸ್‌ ಶಾಸಕ

ವಾರ್ನರ್​​ ಬೆನ್ನಲ್ಲೇ ಕ್ರಿಕೆಟ್​ಗೆ ಗುಡ್​ ಬೈ ಹೇಳಿದ ಆರೋನ್ ಫಿಂಚ್​

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:5 × one =
Remember me
