ಎರ್ನಾಕುಲಂ:ಮಹಿಳಾ ವೈದ್ಯೆಗೆ ತೊಂದರೆ ಕೊಟ್ಟಿದ್ದನ್ನು ಪ್ರಶ್ನಿಸಿದ ಯುವ ವೈದ್ಯನ ಮೇಲೆ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿರುವ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ.ಜೋಸನೀಲ್ ಸೈರಸ್ (26) ಮತ್ತು ರಾಬಿನ್ ರೋಷನ್ (27) ಎಂಬುವರೇ ಈ ಕೃತ್ಯ ಎಸಗಿರುವ ಆರೋಪಿಗಳಾಗಿದ್ದು, ಇಬ್ಬರ ವಿರುದ್ಧ ಕೇರಳ ಹೆಲ್ತ್‌ ಕೇರ್ ಸರ್ವಿಸ್ ಪರ್ಸನ್ ಮತ್ತು ಹೆಲ್ತ್‌ಕೇ‌ ಸೇವಾ ಸಂಸ್ಥೆಗಳ (ಹಿಂಸಾಚಾರ ಮತ್ತು ಆಸ್ತಿ ಹಾನಿ ತಡೆ) ಕಾಯ್ದೆ ಮತ್ತು ಐಪಿಸಿ 332 ಸೆಕ್ಷನ್ 3 ಮತ್ತು 4 ರ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.ಘಟನೆ ಹಿನ್ನೆಲೆ:ಶನಿವಾರದಂದು ಆರೋಪಿಗಳು ತಮ್ಮ ಸಂಬಂಧಿಕರನ್ನು ಭೇಟಿ ಮಾಡಲು ಎರ್ನಾಕುಲಂನ ಆಸ್ಪತ್ರೆಗೆ ಬಂದಿದ್ದರು. ಈ ವೇಳೆ ಮಹಿಳಾ ವೈದ್ಯೆ ಹಾಗೂ ಆತನ ಸ್ನೇಹಿತ ಡಾ. ಹರೀಶ್ ಮೊಹಮ್ಮದ್(25)​​ ರೋಗಿಗೆ ಚಿಕಿತ್ಸೆ ನೀಡಿ ಅಲ್ಲಿಂದ ಹೊರ ನಡೆದು ಕೆಫೆಟೇರಿಯಾಗೆ ಹೋಗಿದ್ದಾರೆ.ಈ ವೇಳೆ ವೈದ್ಯರನ್ನು ಹಿಂಬಾಲಿಸಿದ ಆರೋಪಿಗಳು ಅವರು ಕುಳಿತಲ್ಲಿಯೇ ಹೋಗಿ, ಮಹಿಳಾ ವೈದ್ಯೆಯ ಮೇಲೆ ಬೀಳುವಂತೆ ನಟಿಸಿ ಕ್ಷಮಿಸುವಂತೆ ಕೇಳುವಂತೆ ಹೇಳಿದ್ದಾರೆ. ಈ ವೇಳೆ ಹರೀಶ್​ ಅವರಿಬ್ಬರಿಗೂ ಇದರ ಬಗ್ಗೆ ಪ್ರಶ್ನಿಸಿದಾಗ ಆರೋಪಿಗಳು ವಾಗ್ವಾದಕ್ಕಿಳಿದು ಅವಾಚ್ಯ ಶಬ್ದಗಳಿಂದ ನಿಂದಿಸಲು ಪ್ರಾರಂಭಿಸಿ ಹಲ್ಲೆ ನಡೆಸಿದ್ದಾರೆ.ಈ ಕುರಿತು ಮಾತನಾಡಿದ ಹರೀಶ್​​, ಆರೋಪಿಗಳ ವರ್ತನೆ ಬಗ್ಗೆ ನಾನು ಪ್ರಶ್ನಿಸಿದಾಗ ಅವರು ನನ್ನ ಜತೆ ವಾಗ್ವಾದಕ್ಕಿಳಿದು ಹಲ್ಲೆ ನಡೆಸಿದ್ದಾರೆ. ಅವರು ನನ್ನ ಮೇಲೆ ದಾಳಿ ಮಾಡುತ್ತಾರೆಂದು ಊಹಿಸಿರಲಿಲ್ಲ. ನನ್ನ ಮೇಲೆ ಹಲ್ಲೆ ನಡೆಸುವ ವೇಳೆ ಒಬ್ಬನ ಮೊಬೈಲ್​ ಫೋನ್​ ಕೆಳಗೆ ಬಿದ್ದಿದ್ದು, ಅದನ್ನು ಪೋಲಿಸರಿಗೆ ಹಸ್ತಾಂತರಿಸಿದ್ದೇನೆ ಎಂದು ಹೇಳಿದ್ದಾರೆ.
ಘಟನೆಗೆ ಖಂಡನೆ:ಘಟನೆಯನ್ನು ಖಂಡಿಸಿರುವ ಆರೋಗ್ಯ ಸಚಿವೆ ವೀಣಾ ಜಾರ್ಜ್, ವೈದ್ಯರು ಮತ್ತು ಆರೋಗ್ಯ ಕಾರ್ಯಕರ್ತರೊಂದಿಗೆ ಸಮಾಜ ನಿಲ್ಲಬೇಕು ಎಂದು ಒತ್ತಾಯಿಸಿದರು. ವೈದ್ಯರು ರೋಗಿಗಳಿಗೆ ನಿಸ್ವಾರ್ಥವಾಗಿ ಕರ್ತವ್ಯ ನಿರ್ವಹಿಸುವ ನಿರ್ಭೀತಿಯ ವಾತಾವರಣ ನಿರ್ಮಾಣವಾಗಬೇಕು ಎಂದು ಜಾರ್ಜ್ ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 15 =
Remember me
