ಮಧ್ಯಪ್ರದೇಶ:ದೇವಸ್ಥಾನಕ್ಕೆ ತೆರಳುತ್ತಿದ್ದ ಭಕ್ತರ ತಂಡ ಚಂಬಲ್ ನದಿ ದಾಟುತ್ತಿದ್ದಾಗ ನೀರಿನಲ್ಲಿ ಮುಳುಗಿ ಇಬ್ಬರು ಸಾವನ್ನಪ್ಪಿದ್ದು, ಐವರು ನಾಪತ್ತೆಯಾಗಿದ್ದಾರೆ. ರಾಜಸ್ಥಾನದ ಕರೌಲಿ ಜಿಲ್ಲೆಯ ಕೈಲಾ ದೇವಿ ದೇವಸ್ಥಾನಕ್ಕೆ 17 ಜನರ ಭಕ್ತರ ತಂಡ ದೇವಿಯ ದರ್ಶನ ಪಡೆಯಲು ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ.
ದಿಯೋಕಿನಂದನ್ ಕುಶ್ವಾಹ್(55) ಮತ್ತು 40 ವರ್ಷದ ಕಲ್ಲೋ ಕುಶ್ವಾಹ್ ಮೃತರು. ಶಿವಪುರಿ ಜಿಲ್ಲೆಯ ತನ್ನ ಸ್ಥಳೀಯ ಗ್ರಾಮದಿಂದ ರಾಜಸ್ಥಾನದ ಕರೌಲಿ ಜಿಲ್ಲೆಯ ಕೈಲಾ ದೇವಿ ದೇವಸ್ಥಾನದವರೆಗೆ ಧಾರ್ಮಿಕ ಪಾದಯಾತ್ರೆ ಕೈಗೊಂಡಿದ್ದಾಗ ನದಿಯಲ್ಲಿ ಕೊಚ್ಚಿ ಹೋಗಿದ್ದಾರೆ.
ಇದನ್ನೂ ಓದಿ:ಡ್ರೈ ಕ್ಲೀನ್‌ಗೆ ಬಟ್ಟೆ ಕೊಡೋಕೆ ಹೋದ ಮದುಮಗಳು 6 ಮಕ್ಕಳ ತಂದೆ ಜತೆ ಎಸ್ಕೇಪ್!
ದಿಯೋಕಿನಂದನ್ ಕುಶ್ವಾಹ್ ಅವರ ಪತ್ನಿ ಅಲೋಪಾ ಕುಶ್ವಾಹ್, ರುಕ್ಮಿಣಿ ಕುಶ್ವಾಹ್, ಲವ್ಕುಶ್ ಕುಶ್ವಾಹ್ ಬ್ರಿಜ್ಮೋಹನ್ ಕುಶ್ವಾಹ್ ಮತ್ತು ರಶ್ಮಿ ಕುಶ್ವಾಹ್, ಎಲ್ಲಾ ಕುಟುಂಬ ಸದಸ್ಯರು ಅಥವಾ ಹತ್ತಿರದ ಸಂಬಂಧಿಗಳಾದ ಐವರು ನದಿಯಲ್ಲಿ ನಾಪತ್ತೆಯಾಗಿದ್ದಾರೆ. ಇವರೆಲ್ಲರೂ ಶಿವಪುರಿ ಜಿಲ್ಲಾ ಕೇಂದ್ರದಿಂದ 22 ಕಿಮೀ ದೂರದಲ್ಲಿರುವ ಚಿಲ್ವಾಡ ಗ್ರಾಮದ ನಿವಾಸಿಗಳಾಗಿದ್ದಾರೆ.
ಇದನ್ನೂ ಓದಿ:ಡಿವೋರ್ಸ್ ಕೊಟ್ಟ ಪತಿ; ಮೀಸೆ, ಗಡ್ಡ ಬಿಟ್ಟು ಪುರುಷನಾದ ಮಹಿಳೆ!
ಈ ನದಿಯು ಮಧ್ಯಪ್ರದೇಶದ ಗ್ವಾಲಿಯರ್-ಚಂಬಲ್ ಪ್ರದೇಶವನ್ನು ರಾಜಸ್ಥಾನದ ಬ್ರಜ್ ಪ್ರದೇಶದೊಂದಿಗೆ ವಿಭಜಿಸುತ್ತದೆ. 17 ಮಂದಿ ಗ್ವಾಲಿಯರ್-ಚಂಬಲ್ ಪ್ರದೇಶದ ಶಿವಪುರಿ ಜಿಲ್ಲೆಯ ಹಳ್ಳಿಯೊಂದರಿಂದ ದೇವಿಯ ದರ್ಶನಕ್ಕೆ ಆಗಮಿಸಿದ್ದರು. ರಾಜಸ್ಥಾನದ ಪೊಲೀಸರು ಮತ್ತು ರಕ್ಷಣಾ ಕಾರ್ಯಕರ್ತರು ನಾಪತ್ತೆಯಾದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತಂದೆ-ತಾಯಿ ವಿಧಿವಶ; 20 ವರ್ಷದಿಂದ ಮನೆಯಲ್ಲೇ ಬಂಧಿಯಾದ ಅಣ್ಣ-ತಂಗಿ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:five × five =
Remember me
