ಕೋಲ್ಕತ್ತಾ:ಕಳೆದ ಒಂದು ತಿಂಗಳಿನಿಂದ ಆಹಾರ ನುಂಗಲು ಕಷ್ಟಪಡುತ್ತಿದ್ದ ಹಾಗೂ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬನು ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದನು. ಈ ರೋಗಿಯ ಹೊಟ್ಟೆಯಲ್ಲಿ ನೋಟುಗಳು ಪತ್ತೆಯಾಗಿವೆ.
ಈ ರೋಗಿಯು ಮಾನಸಿಕ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದವನಾಗಿದ್ದು, ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಾರಣ ಕೋಲ್ಕತ್ತಾದ ಸರ್ಕಾರಿ ಸ್ವಾಮ್ಯದ ಆರ್‌ಜಿ ಕಾರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಆತನನ್ನು ಚಿಕಿತ್ಸೆಗೆ ಒಳಪಡಿಸಿದಾಗ ಅನ್ನನಾಳದಲ್ಲಿ 100 ರೂಪಾಯಿಯ ಎರಡು ನೋಟುಗಳು ಇರುವುದು ಪತ್ತೆಯಾಗಿದೆ.
ಇದನ್ನೂ ಓದಿ:ಒಂದು ತಿಂಗಳ ಕಾಲ ಕೀಟ ತಿಂದು, ತನ್ನ ಮೂತ್ರವನ್ನೇ ಕುಡಿದು ಬದುಕುಳಿದ!
ಕೂಡಲೇ ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಅನ್ನನಾಳದಲ್ಲಿ ಸಿಕ್ಕಿಹಾಕಿಕೊಂಡಿದ್ದ 100 ಎರಡು ನೋಟುಗಳನ್ನು ಹೊರ ತೆಗೆದಿದ್ದಾರೆ. ಶಸ್ತ್ರಚಿಕಿತ್ಸೆ ಯಶಸ್ವಿಯಾದ ರೋಗಿ ಚೇತರಿಸಿಕೊಂಡಿದ್ದು, ಬಳಿಕ ವೈದ್ಯರು ಆತನನ್ನು ಮನೆಗೆ ಕಳುಹಿಸಿಕೊಟ್ಟಿದ್ದಾರೆ. ಇದಕ್ಕೂ ಮೊದಲು ಆತನ ಮಾನಸಿಕ ಸಮಸ್ಯೆಯ ಕುರಿತು ತಪಾಸಣೆ ಮಾಡಿ ಆರೋಗ್ಯ ವೃದ್ಧಿಗೆ ಸಲಹೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:ಬ್ರೆಸ್ಟ್‌ ಕ್ಯಾನ್ಸರ್‌ ವಿರುದ್ಧ ಹೋರಾಡಿ ಗೆದ್ದ ನಟಿ ಹಂಸನಂದಿನಿ
ವೈದ್ಯರು ಮಾಹಿತಿ ನೀಡಿದ ಪ್ರಕಾರ, ರಾಟ್‌ ಟೂತ್ ಫೋರ್ಸ್ಪ್ ಬಳಸಿ ಎಂಡೋಸ್ಕೋಪಿಕ್ ಮೂಲಕ ಎರಡೂ ಕರೆನ್ಸಿ ನೋಟುಗಳನ್ನು ಒಂದೊಂದಾಗಿ ಹೊಟ್ಟೆಯಿಂದ ತೆಗೆಯಲಾಗಿದೆ ಎಂದು ಹೇಳಿದ್ದಾರೆ.
ಇನ್‌ಸ್ಟಾಗ್ರಾಮ್‌ ರೀಲ್‌ ಚಿತ್ರೀಕರಿಸುವ ವೇಳೆ ಭೀಕರ ಅಪಘಾತ: ಮಹಿಳೆ ಸಾವು, ಇಬ್ಬರು ಅರೆಸ್ಟ್‌

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 18 =
Remember me
