ರಾಯ್​ಪುರ:ಸಂಬಂಧಿಕರೊಬ್ಬರ ಮನೆಯಲ್ಲಿ ರಕ್ಷಾ ಬಂಧನ ಮುಗಿಸಿ ವಾಪಸ್​ ಆಗುತ್ತಿದ್ದ ವೇಳೆ ಸಹೋದರಿಯರಿಬ್ಬರ ಮೇಲೆ 10 ಮಂದಿ ದುರುಳರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್​ಗಢದ ರಾಯ್​ಪುರದಲ್ಲಿ ನಡೆದಿದೆ.
ಪ್ರಕರಣ ಸಂಬಂಧ ಪೊಲೀಸರು 10 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ರಾಜ್ಯ ಬಿಜೆಪಿ ಘಟಕದ ಪ್ರಭಾವಿ ನಾಯಕರ ಪುತ್ರ ಪ್ರಕರಣದ ಪ್ರಮುಖ ರೂವಾರಿ ಎಂದು ಹೇಳಲಾಗಿದೆ. ಸಂತ್ರಸ್ತೆಯರ ಜೊತೆಗಿದ್ದ ವ್ಯಕ್ತಿಯ ಮೇಲೆ ಆರೋಪಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ರಾಯ್​ಪುರದ ನಿವಾಸಿಗಳಾದ ಸಹೋದರಿಯರಿಬ್ಬರು ರಕ್ಷಾ ಬಂಧನದ ದಿನದಂದು ತಮ್ಮ ಸಂಬಂಧಿಕರ ಮನೆಗೆ ತೆರಳಿ ವಾಪಸ್​ ಆಗುತ್ತಿದ್ದರು. ಈ ವೇಳೆ ನಗರದ ಹೊರವಲಯದಲ್ಲಿ ಮೂವರು ಆರೋಪಿಗಳು ಇವರಿಬ್ಬರನ್ನು ಅಡ್ಡಗಟ್ಟಿದ್ದು, ಅವರ ಬಳಿ ಇದ್ದ ಮೊಬೈಲ್​ ಹಣ ಹಾಗೂ ಬೆಲೆಬಾಳುವ ವಸ್ತುಗಳನ್ನು ದೋಚಿದ್ದಾರೆ.
ಇದನ್ನೂ ಓದಿ:ಅಕ್ರಮ ಹಣ ವರ್ಗಾವಣೆ ಪ್ರಕರಣ; ಜೆಟ್​ ಏರ್​ವೇಸ್​ ಸಂಸ್ಥಾಪಕ ನರೇಶ್​ ಗೋಯಲ್​ 10ದಿನ ಇಡಿ ವಶಕ್ಕೆ
ಇದಾದ ಕೆಲ ಕ್ಷಣಗಳ ಬಳಿಕ ಪ್ರಕರಣದ ಏಳು ಆರೋಪಿಗಳು ಸ್ಥಳಕ್ಕೆ ಬಂದಿದ್ದು, ಸಹೋದರಿಯರಿಬ್ಬರನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಸಂತ್ರಸ್ತೆಯರ ಜೊತೆಗಿದ್ದ ವ್ಯಕ್ತಿಯ ಮೇಲೆ ಆರೋಪಿಗಳು ಮಾರಣಾಂತಿಕ ಹಲ್ಲೆ ನಡೆಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಸ್ಥಳೀಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪ್ರಕರಣ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದ್ದು, ಈ ಪೈಕಿ ರಾಜ್ಯ ಬಿಜೆಪಿ ಘಟಕದ ಪ್ರಭಾವಿ ನಾಯಕನ ಪುತ್ರ ಪೂನಮ್​ ಠಾಕೂರ್​ ಪ್ರಮುಖ ಆರೋಪಿ ಎಂದು ತಿಳಿದು ಬಂದಿದೆ. ಈತನ ಮೇಲೆ ಈಗಾಗಲೇ ಸಾಕಷ್ಟು ಅಪರಾಧ ಪ್ರಕರಗಳ ವಿಚಾರಣೆ ನಡೆಯುತ್ತಿದ್ದು, ಇತ್ತೀಚಿಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿ ಹೊರ ಬಂದಿದ್ದ ಎಂದು ತನಿಖಾಧಿಕಾರಿ ಮಾಹಿತಿ ನೀಡಿದ್ದಾರೆ.
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:1 × one =
Remember me
