ಶ್ರೀನಗರ:ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನೆಯು ಉಗ್ರರನ್ನು ಬೆನ್ನಟ್ಟುತ್ತಿದ್ದು, ಒಂದರ ನಂತರ ಒಂದರಂತೆ ಸರಣಿ ಎನ್‌ಕೌಂಟರ್‌ಗಳನ್ನು ನಡೆಸುವ ಮೂಲಕ ಉಗ್ರ ಸಂಹಾರವನ್ನು ಮಾಡುತ್ತಿದೆ. ಇಂದು ಕಾಶ್ಮೀರದ ಬಾರಾಮುಲ್ಲಾದಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ. ಘಟನೆಯಲ್ಲಿ ಓರ್ವ ಪೊಲೀಸ್ ಅಧಿಕಾರಿ ಗಾಯಗೊಂಡಿದ್ದಾರೆ.
ಇದನ್ನೂ ಓದಿ:ಸಿಎಂ ಅರವಿಂದ್ ಕೇಜ್ರಿವಾಲ್ ನ್ಯಾಯಾಂಗ ಬಂಧನ ಜು.3 ರವರೆಗೆ ವಿಸ್ತರಿಸಿದ ಕೋರ್ಟ್
ಬಾರಾಮುಲ್ಲಾದ ಸೋಪೋರ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದೆ. ಸೋಪೋರ್‌ನ ಹಡಿಪೋರಾದಲ್ಲಿ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದಾರೆ. ಅವರ ಗುರುತು ಪತ್ತೆ ಹಚ್ಚಲಾಗಿಲ್ಲ ಎಂದು ಉನ್ನತ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಸೋಮವಾರ, ಕೇಂದ್ರಾಡಳಿತ ಪ್ರದೇಶದ ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿತ್ತು. ಭಾನುವಾರ ರಾತ್ರಿ ಜಿಲ್ಲೆಯ ಅರಗಂ ಪ್ರದೇಶದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಸರ್ಚ್ ಕಾರ್ಯಾಚರಣೆ ಆರಂಭಿಸಿದ ಬಳಿಕ ಗುಂಡಿನ ಚಕಮಕಿ ನಡೆದಿದೆ.
ಭದ್ರತಾ ಸಿಬ್ಬಂದಿಯ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ ನಂತರ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ. ಭದ್ರತಾ ಪಡೆ ಮತ್ತು ಶೋಧ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಬರೆದುಕೊಂಡಿದ್ದಾರೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಬಿಹಾರ: ಉದ್ಘಾಟನೆಗೆ ಮುನ್ನವೇ ಕುಸಿದು ಬಿದ್ದ 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿದ್ದ ಬೃಹತ್​ ಸೇತುವೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
