ಶ್ರೀನಗರ:ದೇಶಾದ್ಯಂತ ಎರಡನೇ ಹಂತದ ಚುನಾವಣಾ ಕಾವು ಜೋರಾಗಿರುವ ಸಮಯದಲ್ಲೇ ಇತ್ತ ಜಮ್ಮು ಕಾಶ್ಮೀರದಿಂದ ಬಿಗ್‌ ನ್ಯೂಸ್‌ ಹೊರಬಿದ್ದಿದೆ.ಗುರುವಾರ ಮತ್ತು ಶುಕ್ರವಾರ ಜಮ್ಮು ಕಾಶ್ಮೀರದ ಬಾರಾಮುಲ್ಲದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:25000 ಕೋಟಿ ರೂ. ಸಹಕಾರಿ ಬ್ಯಾಂಕ್ ಹಗರಣ: ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಕ್ಲೀನ್ ಚಿಟ್​
ಉತ್ತರ ಕಾಶ್ಮೀರದ ಸೋಪೋರ್ ಪ್ರದೇಶದ ಚೆಕ್ ಮೊಹಲ್ಲಾ ನೌಪೋರಾದಲ್ಲಿ ಗುರುವಾರ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಎನ್‌ಕೌಂಟರ್ ಆರಂಭಗೊಂಡು, ಶುಕ್ರವಾರ ಮುಂಜಾನೆಯೂ ಗುಂಡಿನ ದಾಳಿ ಮುಂದುವರೆದಿದೆ. ಇದುವರೆಗೆ ಇಬ್ಬರು ಉಗ್ರರು ಬಲಿಯಾಗಿದ್ದಾರೆ ಎಂದು ಹಿರಿಯ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.
ಎನ್‌ಕೌಂಟರ್‌ನಲ್ಲಿ ಗಾಯಗೊಂಡ ಇಬ್ಬರು ಸೇನಾ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಗುರುವಾರ ಎನ್‌ಕೌಂಟರ್ ನಡೆದ ಸ್ಥಳದ ಸಮೀಪ ನಾಗರಿಕರೊಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಎನ್‌ಕೌಂಟರ್ ನಡೆದ ಪ್ರದೇಶದಿಂದ ಮೃತದೇಹಗಳನ್ನು ಸ್ಥಳಾಂತರಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಎನ್‌ಕೌಂಟರ್ ನಡೆದ ಸ್ಥಳದಿಂದ ಹತರಾದ ಉಗ್ರರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗುತ್ತಿದೆ ಎಂದು ವರದಿಯಾಗಿದೆ.
ಆಂಧ್ರಪ್ರದೇಶ: ಭಾರತದ ಅತ್ಯಂತ ಶ್ರೀಮಂತ ಅಭ್ಯರ್ಥಿ ಇವರೇ? ಆಸ್ತಿ ಎಷ್ಟಿದೆ? ಇಲ್ಲಿದೆ ಮಾಹಿತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 4 =
Remember me
