ಶ್ರೀನಗರ:ಜಮ್ಮು-ಕಾಶ್ಮೀರದ ಕಥುವಾ ಗ್ರಾಮವೊಂದರಲ್ಲಿ ಮಂಗಳವಾರ ತಡರಾತ್ರಿ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಉಗ್ರರನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ.
ಇದನ್ನೂ ಓದಿ:ಅವನ್ಯಾವನೋ ದರ್ಶನ್ ಹೀಗೇ ಸಾಯಲಿ, ಅವಳೂ ಸಾಯಬೇಕು’!: ಕೊಲೆಯಾದ ರೇಣುಕಾಸ್ವಾಮಿ ಹೆತ್ತವರ ಹಿಡಿಶಾಪ
ಈ ಕರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಅರೆಸೇನಾಪಡೆಯ ಓರ್ವ ಯೋಧ ಕೂಡ ಹುತಾತ್ಮರಾಗಿದ್ದಾರೆ. ಜಮ್ಮುವಿನಲ್ಲಿ ರಾತ್ರೋರಾತ್ರಿ ಆರಂಭವಾದ ಎರಡು ಎನ್‌ಕೌಂಟರ್‌ಗಳು ಬೆಳಗಿನವರೆಗೂ ನಡೆದವು. ಒಂದು ಕಾರ್ಯಚರಣೆ ಕಥುವಾದಲ್ಲಿ ನಡೆದರೆ, ಮತ್ತೊಂದು ಎನ್​ಕೌಂಟರ್​ ದೋಡಾದಲ್ಲಿ ನಡೆಯಿತು. ದೋಡಾದಲ್ಲಿ ಸೇನಾ ಪೋಸ್ಟ್‌ನ ಮೇಲಿನ ದಾಳಿಯಲ್ಲಿ ಐವರು ಸೈನಿಕರು ಮತ್ತು ವಿಶೇಷ ಪೊಲೀಸ್ ಅಧಿಕಾರಿ ಗಾಯಗೊಂಡರು.
ಜಮ್ಮುವಿನಲ್ಲಿ ಈ ಎರಡು ಭಯೋತ್ಪಾದಕ ಘಟನೆಗಳು ನಡೆಯುವ ಕೇವಲ 2 ದಿನಗಳ ಮೊದಲು, ಯಾತ್ರಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಬಸ್ ರಿಯಾಸಿಯಲ್ಲಿ ದಾಳಿಗೆ ಒಳಗಾಗಿತ್ತು. ಗುಂಡಿನ ದಾಳಿಯಿಂದ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿತ್ತು. ಈ ವೇಳೆ 9 ಪ್ರಯಾಣಿಕರು ಸಾವನ್ನಪ್ಪಿದ್ದರು ಮತ್ತು 30 ಜನ ಗಾಯಗೊಂಡಿದ್ದಾರೆ.
ಕಥುವಾದಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಮೇಲ್ವಿಚಾರಣೆ ನಡೆಸುತ್ತಿರುವ ಜಮ್ಮು ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಆನಂದ್ ಜೈನ್ ಅವರು ಬುಧವಾರ ಬೆಳಿಗ್ಗೆ ಎನ್‌ಕೌಂಟರ್‌ಗಳ ವಿವರಗಳ ಬಗ್ಗೆ ಮಾಹಿತಿ ನೀಡಿದ್ದಾರೆ. ನಿನ್ನೆ ತಡರಾತ್ರಿ ದೋಡಾದ ಚಟರ್ಗಾಲಾ ಪ್ರದೇಶದ ಸೇನಾ ನೆಲೆಯಲ್ಲಿ ಪೊಲೀಸರು ಮತ್ತು ರಾಷ್ಟ್ರೀಯ ರೈಫಲ್ಸ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ಉನ್ನತ ಮಟ್ಟದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆಯುತ್ತಿದೆ ಎಂದು ತಿಳಿಸಿದರು.
ನಿನ್ನೆ ಸಂಜೆ ಕಥುವಾ ದಾಳಿಯಲ್ಲಿ ಇಬ್ಬರು ಭಯೋತ್ಪಾದಕರು ಭಾಗಿಯಾಗಿದ್ದು, ಅವರಲ್ಲಿ ಒಬ್ಬನನ್ನು ನಿನ್ನೆ ರಾತ್ರಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎರಡನೇ ಭಯೋತ್ಪಾದಕ ಯುಎಸ್ ನಿರ್ಮಿತ ಎಂ4 ಕಾರ್ಬೈನ್ ಅಸಾಲ್ಟ್ ರೈಫಲ್‌ನೊಂದಿಗೆ ಶಸ್ತ್ರಸಜ್ಜಿತನಾಗಿದ್ದನು. ಆತ ಅರಣ್ಯ ಪ್ರದೇಶದಲ್ಲಿ ಅಡಗಿಕೊಂಡಿದ್ದ. ಆತನನ್ನು ಇಂದು ಬೆಳಿಗ್ಗೆ ಎನ್​ಕೌಂಟ್ ಮಾಡಲಾಯಿತು.
ಅಡಗಿಕೊಂಡಿದ್ದ ಭಯೋತ್ಪಾದಕರು ಹಲವಾರು ಮನೆಗಳಿಗೆ ನೀರು ಕೇಳಿದರು, ಇದರಿಂದ ಗ್ರಾಮಸ್ಥರ ಅನುಮಾನಗೊಂಡಿದ್ದಾರೆ. ಈ ಬಗ್ಗೆ ಗ್ರಾಮಸ್ಥರು ಎಚ್ಚರಿಕೆ ನೀಡಿದಾಗ ಗುಂಡು ಹಾರಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಒಬ್ಬ ನಾಗರಿಕ ಗಾಯಗೊಂಡಿದ್ದಾನೆ.ಎನ್‌ಕೌಂಟರ್ ವೇಳೆ ಹುತಾತ್ಮರಾದ ಭದ್ರತಾ ಪಡೆ ಸಿಬ್ಬಂದಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ(ಸಿಆರ್‌ಪಿಎಫ್)ಗೆ ಸೇರಿದವರು ಎಂದು ಹೇಳಲಾಗಿದೆ.
ಠಾಣೆಯಲ್ಲಿರುವ ಕೊಲೆ ಆರೋಪಿ ದರ್ಶನ್​ಗೆ ದೊನ್ನೆ ಬಿರಿಯಾನಿ ತರಿಸಿದ ಪೊಲೀಸರು: ಅಬ್ಬಾ.. ಇದೆಂತಾ ರಾಜಮರ್ಯಾದೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
