ಜಮ್ಮು:ಇತ್ತ ಕರೊನಾ ವೈರಸ್‌ನಿಂದಾಗಿ ಇಡೀ ವಿಶ್ವವೇ ತತ್ತರಿಸಿರುವ ಸಂದರ್ಭದಲ್ಲಿಯೂ ಅತ್ತ ಕಳೆದೆರಡು ವಾರಗಳಿಂದ ಜಮ್ಮು ಕಾಶ‍್ಮೀರದಲ್ಲಿ ಉಗ್ರರ ಉಪಟಳ ಹೆಚ್ಚಾಗುತ್ತಿದೆ. ಗಡಿ ಭಾಗದಲ್ಲಿ ಭಾರತೀಯ ಸೇನೆಯ ಮೇಲೆ ದಾಳಿ ನಡೆಸಲು ಷಡ್ಯಂತ್ರಗಳನ್ನು ರೂಪಿಸುತ್ತಲೇ ಇದ್ದಾರೆ.ಆದರೆ ಸದ್ಯ ಈ ಉಗ್ರರ ಆಟ ನಡೆಯುತ್ತಿಲ್ಲ. ಅವರಿಗೆ ತಕ್ಕ ಪಾಠ ಕಲಿಸಲು ಭಾರತೀಯ ಸೇನೆ ಸಜ್ಜಾಗಿ ನಿಂತಿದೆ. ಇಂದು ಬೆಳಗ್ಗೆ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದು ಉರುಳಿಸಿದೆ.ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಉಗ್ರರನ್ನು ಹತ್ಯೆ ಮಾಡಿದ್ದಾರೆ, ಪೊಲೀಸರು ಮತ್ತು ಸಿ ಆರ್ ಪಿಎಫ್ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸಿರುವ ಬಗ್ಗೆ ವರದಿಯಾಗಿದೆ.ಜಮ್ಮುವಿನ ಜೈನ್ ಪೋರಾ ಗ್ರಾಮದ ಮೆಲ್ಹೋರಾ ಸಮೀಪ ಉಗ್ರರ ದಮನಕ್ಕಾಗಿ ನಿನ್ನೆ ಸಂಜೆಯಿಂದ ಭಾರತೀಯ ಭದ್ರತಾ ಪಡೆಗಳು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇನ್ನೂ ಇಬ್ಬರು ಉಗ್ರರು ಅಡಗಿ ಕುಳಿತ್ತಿದ್ದಾರೆಂದು ಮಾಹಿತಿ ಸಿಕ್ಕಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ.ಕಳೆದ ಒಂದು ತಿಂಗಳಿನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರು ಉಗ್ರರನ್ನು ಹೊಡೆದು ಉರುಳಿಸಲಾಗಿದೆ ಎಂದು ಭಾರತೀಯ ಸೇನೆ ಹೇಳಿದೆ.(ಏಜೆನ್ಸೀಸ್‌)
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:twelve − 6 =
Remember me
