ಕದಿರಿ:ಎರಡು ವರ್ಷದ ಬಾಲಕಿಯೊಬ್ಬಳ ಗಂಟಲಿನಲ್ಲಿ ಶೇಂಗಾ (ಕಡಲೆಬೀಜ) ಸಿಲುಕಿಕೊಂಡು ಮೃತಪಟ್ಟಿರುವ ದಾರುಣ ಘಟನೆ ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಕದಿರಿ ಎಂಬಲ್ಲಿ ನಡೆದಿದೆ.ಮೃತ ಬಾಲಕಿಯನ್ನು ನಯನಶ್ರೀ ಎಂದು ಗುರುತಿಸಲಾಗಿದ್ದು, ಮನೆಯಲ್ಲಿಯೇ ಈ ಘಟನೆ ನಡೆದಿದೆ. ಕರ್ನಾಟಕದ ಬಾಗೇಪಲ್ಲಿ ತಾಲೂಕಿನ ಕುಟುಂಬವೊಂದು ಸಂಬಂಧಿಕರ ಮನೆಗೆ ತೆರಳಿತ್ತು. ಎರಡು ವರ್ಷದ ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಕಡಲೆಬೀಜವನ್ನು ಬಾಯಿಗೆ ಹಾಕಿಕೊಂಡಿದ್ದು, ಅದು ಆಕೆಯ ಗಂಟಲಿಗೆ ಸಿಲುಕಿ ಉಸಿರಾಟದ ತೊಂದರೆಯಾಗಿದೆ.
ಇದನ್ನೂ ಓದಿ:ಗರ್ಭಿಣಿಗೆ ಆಪರೇಷನ್: ಹೊಟ್ಟೆಯಲ್ಲಿಯೇ ಕತ್ತರಿ ಬಿಟ್ಟ ಹೊಲಿಗೆ ಹಾಕಿದ ವೈದ್ಯರು..?ಇದನ್ನು ಗಮನಿಸಿದ ಮನೆಯವರು ಬೀಜವನ್ನು ಹೊರತೆಗೆಯಲು ಪ್ರಯತ್ನಿಸಿದ್ದು, ಅದು ಸಾಧ್ಯವಾಗಲಿಲ್ಲ. ತಕ್ಷಣ ಕುಟುಂಬಸ್ಥರು ಮಗುವನ್ನು ಕದಿರಿ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ದುರದೃಷ್ಟವಶಾತ್, ಬಾಲಕಿಯ ಸ್ಥಿತಿ ಗಂಭೀರವಾಗಿದ್ದು, ಸರ್ಕಾರಿ ಆಸ್ಪತ್ರೆಗೆ ರವಾನಿಸದ್ದಾರೆ. ಅಲ್ಲಿ ಮಗುವನ್ನು ಪರೀಕ್ಷಿಸಿದ ವೈದ್ಯರು, ಆಕೆ ಅದಾಗಲೇ ಪ್ರಾಣ ಕಳೆದುಕೊಂಡಿದ್ದಾಳೆ ಎಂದು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ತೆಲಂಗಾಣದ ಮೆಡ್‌ಚಲ್‌ ಜಿಲ್ಲೆಯಲ್ಲಿ ದೇವಸ್ಥಾನದಲ್ಲಿ ಪ್ರಸಾದ ರೂಪದಲ್ಲಿ ನೀಡಿದ ಕೊಬ್ಬರಿ ಚೂರೊಂದು ಗಂಟಲಿಗೆ ಸಿಲುಕಿ ಮೂರು ವರ್ಷದ ಬಾಲಕ ಮೃತಪಟ್ಟಿದ್ದ. ಆ ಘಟನೆ ಮಾಸುವ ಮುನ್ನವೇ ಸದ್ಯ ಮತ್ತೊಂದು ಘಟನೆ ನಡೆದಿದ್ದು, ಚಿಕ್ಕ ಮಕ್ಕಳು ಕೆಲವೊಮ್ಮೆ ಪೂರ್ತಿ ಪ್ರಮಾಣದಲ್ಲಿ ಹಲ್ಲು ಬೆಳೆಯದಿದ್ದರೂ ಅಗಿಯಲು ಯತ್ನಿಸುತ್ತಾರೆ. ಕೊನೆಗೆ ನುಂಗಲೂ ಯತ್ನಿಸಿದಾದ ಜೀವಕ್ಕೆ ಕುತ್ತು ತಂದು ಕೊಂಡು ಪ್ರಾಣ ಕಳೆದುಕೊಳ್ಳುವ ಘಟನೆಗಳು ಸಾಕಷ್ಟಿವೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 1 =
Remember me
