ಭೋಪಾಲ್:ಚೀನಾ ನಿರ್ವಿುತ ಪಟಾಕಿ ಮಾರಾಟ ಮತ್ತು ಖರೀದಿ ಮಾಡುವುದು ಸ್ಪೋಟಕಗಳ ಕಾನೂನು ಪ್ರಕಾರ ಶಿಕ್ಷಾರ್ಹ ಅಪರಾಧವೆಂದು ಮಧ್ಯಪ್ರದೇಶ ಸರ್ಕಾರ ಎಚ್ಚರಿಸಿದೆ. ಈ ನಿಯಮ ಉಲ್ಲಂಘಿಸಿದರೆ ಎರಡು ವರ್ಷ ಜೈಲು ಶಿಕ್ಷೆ ವಿಧಿಸುವುದಾಗಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಗೃಹ ಸಚಿವ ನರೋತ್ತಮ್ ಮಿಶ್ರಾ ಅಧ್ಯಕ್ಷತೆಯಲ್ಲಿ ನಡೆದ ಕಾನೂನು ಮತ್ತು ಸುವ್ಯವಸ್ಥೆ ಪರಿಶೀಲನೆ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಕ್ರಮ ಸುಡುಮದ್ದುಗಳ ಸಂಗ್ರಹ, ವಿತರಣೆ ಮತ್ತು ಮಾರಾಟ ಶಿಕ್ಷಾರ್ಹ ಅಪರಾಧ. ಅದು ಚೀನಿ ಸುಡುಮದ್ದುಗಳಿಗೂ ಅನ್ವಯವಾಗುತ್ತದೆ ಎಂದು ಗೃಹ ಖಾತೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಜೇಶ್ ಅರೋರಾ ಹೇಳಿದ್ದಾರೆ.
ಗೃಹ ಇಲಾಖೆ ಈ ಸಂಬಂಧ ಎಲ್ಲ ಜಿಲ್ಲಾಧಿಕಾರಿಗಳಿಗೆ ಆದೇಶ ಕಳಿಸಿದೆ. ಚೀನಾ ಸಹಿತ ಇತರ ದೇಶಗಳಿಂದ ಪಟಾಕಿ ಆಮದು ಮಾಡಿಕೊಳ್ಳುವುದು ಕಾನೂನು ಬಾಹಿರ ವಾಗುತ್ತದೆ. ದೀಪಾವಳಿ ಸಂದರ್ಭದಲ್ಲಿ ಪ್ಯಾಕೆಟ್​ಗಳ ಮೇಲೆ ದೇವರ ಚಿತ್ರ ಗಳಿರುವ ಪಟಾಕಿ ಬಳಸುವುದನ್ನು ಕೂಡ ಮಧ್ಯ ಪ್ರದೇಶ ಸರ್ಕಾರ ನಿಷೇಧಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
