ಲಖನೌ:ಶುಕ್ರವಾರ ರಾತ್ರಿ ಉತ್ತರ ಪ್ರದೇಶದ ಕನ್ನೌಜ್​ ಜಿಲ್ಲೆಯ ಘಿನೊಐ ಎಂಬ ಗ್ರಾಮದ ಬಳಿ ಟ್ರಕ್​ ಡಿಕ್ಕಿಯಿಂದ ಬೆಂಕಿ ಹೊತ್ತಿಕೊಂಡು ಬಸ್​ನಲ್ಲಿದ್ದ 20 ಪ್ರಯಾಣಿಕರು ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.
ಶುಕ್ರವಾರ ರಾತ್ರಿ ಸುಮಾರು 9.30ಕ್ಕೆ ಅವಘಡ ಸಂಭವಿಸಿದೆ ಎಂದು ಅಂದಾಜಿಸಲಾಗಿದ್ದು, ಬಸ್​ನಲ್ಲಿ ಒಟ್ಟು 46 ಪ್ರಯಾಣಿಕರಿದ್ದರು. ಇದರಲ್ಲಿ ನಿನ್ನೆಯೇ 20 ಮಂದಿಯನ್ನು ರಕ್ಷಿಸಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಉತ್ತರ ಪ್ರದೇಶ ಪೊಲೀಸರು ಮಾಹಿತಿ ನೀಡಿದ್ದಾರೆ.
ಜೈಪುರ ಕಡೆ ತೆರಳುತ್ತಿದ್ದ ಖಾಸಗಿ ಸ್ಲೀಪರ್​ ಕೋಚ್​​ ಬಸ್​ ಮತ್ತು ಟ್ರಕ್​ ನಡುವೆ ಡಿಕ್ಕಿ ಉಂಟಾದ ಬೆನ್ನಲ್ಲೇ ಬಸ್​ಗೆ ಬೆಂಕಿ ತಗುಲಿ ದುರ್ಘಟನೆ ಘಟಿಸಿದೆ. ಘಟನೆಯಲ್ಲಿ ಟ್ರಕ್​ಗೂ ಬೆಂಕಿ ತಗುಲಿದೆ.
ಘಟನೆ ಬಗ್ಗೆ ಟ್ವೀಟ್​ ಮಾಡಿ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಉತ್ತರ ಪ್ರದೇಶದ ಕನೌಜ್ ಎಂಬಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದನ್ನು ಕೇಳಿ ದುಃಖವಾಯಿತು.​ ಅನೇಕ ಜನರು ತಮ್ಮ ಪ್ರಾಣವನ್ನು ಕಳೆದುಕೊಂಡಿದ್ದಾರೆ. ಸಾವಿಗೀಡಾದವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತಾ, ಗಾಯಗೊಂಡವರು ಬೇಗ ಗುಣಮುಖರಾಗಲು ಬಯಸುತ್ತೇನೆಂದು ಇಂದು ಬೆಳಗ್ಗೆ ಹಿಂದಿಯಲ್ಲಿ ಪ್ರಧಾನಿ ಟ್ವೀಟ್​ ಮಾಡಿದ್ದಾರೆ.
ಎರಡು ವಾಹನಗಳಲ್ಲಿ ಧಗಧಗನೇ ಉರಿಯುತ್ತಿದ್ದ ಬೆಂಕಿಯ ಜ್ವಾಲೆಯನ್ನು ನಂದಿಸಲು ಮೂರರಿಂದ ನಾಲ್ಕು ಅಗ್ನಿಶಾಮಕ ವಾಹನಗಳು ಸುಮಾರು 30 ರಿಂದ 40 ನಿಮಿಷ ಶ್ರಮಿಸಿವೆ ಎಂದು ತಿಳಿದುಬಂದಿದೆ.
ಬಸ್​ನಲ್ಲಿದ್ದ ಗಾಯಗೊಂಡ ಪ್ರಯಾಣಿಕ ರಾಮ್​ಸೇನ್​, ಲಾರಿಗೆ ಡಿಕ್ಕಿ ಹೊಡೆದಾಗ ಬಸ್​ನಲ್ಲಿ ಬೆಂಕಿ ಕಾಣಿಸಿತು. ನಾನು ಕಿಟಕಿ ಗಾಜು ಒಡೆದು ಹೊರಬಂದೆ ಎಂದು ನಿನ್ನೆ ಮಾಧ್ಯಮಗಳಿಗೆ ತಿಳಿಸಿದ್ದರು.(ಏಜೆನ್ಸೀಸ್​)
Prime Minister Narendra Modi: I am deeply saddened to know about the horrific road accident in Uttar Pradesh's Kannauj. Several people have lost their lives in the accident. I express my condolences to the bereaved families and wish speedy recovery to the injured persons.pic.twitter.com/prZdMasCHu— ANI (@ANI)January 11, 2020
Prime Minister Narendra Modi: I am deeply saddened to know about the horrific road accident in Uttar Pradesh's Kannauj. Several people have lost their lives in the accident. I express my condolences to the bereaved families and wish speedy recovery to the injured persons.pic.twitter.com/prZdMasCHu
ಉತ್ತರಪ್ರದೇಶ ಬಸ್​ಗೆ ಬೆಂಕಿ; 21 ಪ್ರಯಾಣಿಕರು ಪಾರು, ಉಳಿದವರ ಬಗ್ಗೆ ಇನ್ನು ಸಿಗಬೇಕಿದೆ ಮಾಹಿತಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:ten − four =
Remember me
