ಗುವಾಹಟಿ:ದಕ್ಷಿಣ ಅಸ್ಸಾಂನ ಬರಾಕ್​ ಕಣಿವೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಮಹಿಳೆಯರು, ಮಕ್ಕಳು ಸೇರಿ 20ಕ್ಕೂ ಹೆಚ್ಚು ಜನ ಜೀವಂತ ಸಮಾಧಿಯಾಗಿದ್ದಾರೆ. 9 ಮಂದಿಗೆ ಗಂಭೀರ ಗಾಯಗಳಾಗಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಾಂಗ್ಲಾದೇಶದ ಗಡಿಗೆ ಹೊಂದಿಕೊಂಡಂತೆ ಇರುವ ಕರೀಂಗಂಜ್​ ಜಿಲ್ಲೆಯ ಕಾಳಿಗಂಜ್​ನಲ್ಲಿ ಮನೆಯ ಮೇಲೆ ಗುಡ್ಡ ಕುಸಿದ ಪರಿಣಾಮ ಒಂದೇ ಕುಟುಂಬದ ಐವರು ಸೇರಿ ಒಟ್ಟು 6 ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ:ಆಧಾರ್‌ಕಾರ್ಡ್ ಮಾದರಿಯಲ್ಲಿ ಜಾನುವಾರುಗಳಿಗೂ ಬರಲಿದೆ ಐಡಿ ಕಾರ್ಡ್
ಚಾಚಾರ್​ ಜಿಲ್ಲೆಯ ಕೋಲಾಪುರದಲ್ಲಿ ಕೂಡ ಮನೆಯ ಮೇಲೆ ಗುಡ್ಡ ಕುಸಿದು ಮೂವರು ಮಹಿಳೆಯರು ಮೃತಪಟ್ಟಿದ್ದಾರೆ. ಹೈಲಾಕಂಡಿ ಜಿಲ್ಲೆಯ ಭಟಾಟ್​ಬಜಾರ್​ ಗ್ರಾಮದಲ್ಲಿ ಮೂವರು ಮಹಿಳೆಯರು ಸೇರಿ 7 ಮಂದಿ ಜೀವಂತ ಸಮಾಧಿಯಾಗಿದ್ದಾರೆ.
ಫುಲೆಟ್ರಾಲ್​ ಚಾಚಾರ್​ ಪ್ರದೇಶದಲ್ಲಿ ಭೂಕುಸಿತ ಉಂಟಾಗಿದ್ದು, ಅಧಿಕಾರಿಗಳು ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಕೆಲವು ಮನೆಗಳ ನಿವಾಸಿಗಳನ್ನು ತೆರವುಗೊಳಿಸಿ ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಿದ್ದಾರೆ.
ಆಹಾರ ಕಿಟ್​ಗಾಗಿ ಬಂದು ಕಾಲ್ತುಳಿತಕ್ಕೆ ಸಿಕ್ಕರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − ten =
Remember me
