ಲಖನೌ:ರೈಲಿನಲ್ಲಿ ಟಿಕೆಟ್​ ಇಲ್ಲದೆ ಪ್ರಯಾಣಿಸುತ್ತಿದ್ದ 20 ಪೊಲೀಸರು ಪ್ರಯಾಣ ಟಿಕೆಟ್ ಪರೀಕ್ಷಕ (ಟಿಟಿಇ)ನ ಕೈಯಲ್ಲಿ ಸಿಕ್ಕಿಬಿದ್ದಿರುವ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.
ಶ್ರಮಜೀವಿ ಎಕ್ಸ್​ಪ್ರೆಸ್​ ರೈಲು ದೆಹಲಿಯಿಂದ ಬಿಹಾರದ ರಾಜ್​ಗಿರ್​ಗೆ ತೆರಳುತ್ತಿತ್ತು. ಈ ವೇಳೆ ಟಿಟಿಇ ಉತ್ತರ ಪ್ರದೇಶದ ಬರೇಲಿ ಮತ್ತು ಲಖನೌ ನಡುವೆ ಟಿಕೆಟ್​ ಪರೀಕ್ಷಿಸಲು ಬಂದಾಗ 20 ಪೊಲೀಸರು ಸಿಕ್ಕಿಬಿದ್ದಿದ್ದಾರೆ. ಕೆಲವು ದಿನಗಳ ಹಿಂದೆ ಯುಪಿ ಪೊಲೀಸ್​ ಕಾನ್ಸ್​ಟೇಬಲ್​​ ಒಬ್ಬರು ಲಖನೌದಲ್ಲಿರುವ ವಿಮಾರ್ಟ್​ನಲ್ಲಿ ಮೂರು ಶರ್ಟ್​ಗಳನ್ನು ಕದಿಯುವಾಗ ಸಿಕ್ಕಿಬಿದ್ದಿದ್ದರು. ಇದರ ಬೆನ್ನಲ್ಲೇ ಟಿಕೆಟ್​ ಇಲ್ಲದೆ ಪ್ರಯಾಣಿಸುತ್ತಿದ್ದ ಪೊಲೀಸರು ಸಿಕ್ಕಿಬಿದ್ದಿರುವುದು ಪೊಲೀಸರ ಮೇಲಿನ ನಂಬಿಕೆ ಕುಸಿಯುವಂತೆ ಮಾಡಿದೆ.
ಇದನ್ನೂ ಓದಿರಿ:3 ತಿಂಗಳೊಳಗೆ ವೆರಿಫೈ ಮಾಡದಿದ್ರೆ ಜಾಲತಾಣ ಖಾತೆಗಳು ರದ್ದಾಗುತ್ತಾ? ಈ ಶಾಕಿಂಗ್​ ನ್ಯೂಸ್​ ನಿಜನಾ?
ಟಿಟಿಇ ಪೊಲೀಸರನ್ನು ಹಿಡಿದಾಗ ದಂಡದಿಂದ ತಪ್ಪಿಸಿಕೊಳ್ಳಲು ಯೂನಿಫಾರ್ಮ್​ ತೋರಿಸುವ ಮೂಲಕ ಸಿಬ್ಬಂದಿ ಪೊಲೀಸ್​ ಇಲಾಖೆಗೆ ಕಪ್ಪು ಮಸಿ ಬಳಿದಿದ್ದಾರೆ. ಒಂದು ವೇಳೆ ನನ್ನನ್ನು ಹಿಡಿದರೆ ನಿಮ್ಮ ವಿರುದ್ಧ ಅನೇಕ ಪ್ರಕರಣಗಳನ್ನು ಬರೆಯುತ್ತೇನೆ. ನೀವು ಜೀವನ ಪೂರ್ತಿ ನನ್ನ ನೆನಪಿಸಿಕೊಳ್ಳಬೇಕಾಗುತ್ತದೆ ಎಂದು ಓರ್ವ ಪೊಲೀಸ್​ ಟಿಟಿಇಗೆ ಧಮ್ಕಿ ಹಾಕಿದ್ದಾರೆ. ಅಲ್ಲದೆ, ನೀವು ದಂಡವನ್ನು ಪಡೆದರೆ, ನೀವೇನು ರೈಲ್ವೆ ಸಚಿವರಾಗುವುದಿಲ್ಲ ಎಂದು ಮತ್ತೊರ್ವ ಟಿಟಿಇ ಕುರಿತು ವ್ಯಂಗ್ಯವಾಡಿದ್ದಾರೆ. ಈ ವೇಳೆ ರೈಲಿನಲ್ಲಿದ್ದ ಪ್ರಯಾಣಿಕರೊಬ್ಬರು ಇಡೀ ಘಟನೆಯನ್ನು ವಿಡಿಯೋ ಮಾಡಿ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಭಾರಿ ವೈರಲ್​ ಆಗಿದೆ.
ಲಖನೌ: ರೈಲಿನಲ್ಲಿ ಟಿಕೆಟ್​ ಇಲ್ಲದೆ ಪ್ರಯಾಣಿಸುತ್ತಿದ್ದ 20 ಪೊಲೀಸರು ಪ್ರಯಾಣ ಟಿಕೆಟ್ ಪರೀಕ್ಷಕ (ಟಿಟಿಇ)ನ ಕೈಯಲ್ಲಿ ಸಿಕ್ಕಿಬಿದ್ದಿರುವ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.#UttarPradesh#Policemen#Tickets#Train#TTEpic.twitter.com/fr3CIgrC7u
— Vijayavani (@VVani4U)March 1, 2021

ಪೊಲೀಸರ ಬೆದರಿಕೆಗಳು ರೈಲ್ವೆ ಸಿಬ್ಬಂದಿಯನ್ನು ವಿಚಲಿತಗೊಳಿಸಲಿಲ್ಲ. ಯಾರಿಗೂ ಬಗ್ಗದ ಟಿಟಿಇ ಎಲ್ಲರಿಂದಲೂ ದಂಡವನ್ನು ವಸೂಲಿ ಮಾಡಿಯೇ ಅಲ್ಲಿಂದ ಹೋಗಲು ಅವಕಾಶ ಮಾಡಿಕೊಟ್ಟರು. ರೈಲಿನಲ್ಲಿ ಒಟ್ಟು 45 ಮಂದಿ ಪ್ರಯಾಣಿಕರು ಟಿಕೆಟ್​ ಇಲ್ಲದೆ ಪ್ರಯಾಣಿಸುತ್ತಿದ್ದರು. ಅದರಲ್ಲಿ 20 ಮಂದಿ ಪೊಲೀಸರೇ ಇದ್ದರು. ಎಲ್ಲರಿಂದ ಒಟ್ಟು 22,350 ರೂ. ದಂಡವನ್ನು ಸಂಗ್ರಹಿಸಲಾಗಿದೆ.
ಇದನ್ನೂ ಓದಿರಿ:ಉಗುರೇ ಹೇಳುತ್ತೆ ಆರೋಗ್ಯದ ಗುಟ್ಟು! ಆ ಉಗುರಿನ ಆರೋಗ್ಯ ರಕ್ಷಣೆ ಹೇಗೆ?
ಇನ್ನೂ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದ್ದು, ಪೊಲೀಸರ ನಡೆಯ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದ್ದು, ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ತಪ್ಪು ಮಾಡುವ ಜನರನ್ನು ಹಿಡಿದು ಬುದ್ಧಿ ಹೇಳಬೇಕಾದ ಜವಾಬ್ದಾರಿಯುತ ಸ್ಥಾನದಲ್ಲಿದ್ದ ಪೊಲೀಸರೇ ಹೀಗೆ ಮಾಡಿದರೆ ನಾವ್ಯಾರನ್ನು ನಂಬುವುದು ಎಂದು ಅನೇಕರು ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.(ಏಜೆನ್ಸೀಸ್​)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

ಪಿಎಸ್​ಯುು ಎಂಬ ಬಿಳಿಯಾನೆ; 60ರಲ್ಲಿ 19 ಸಾರ್ವಜನಿಕ ಉದ್ಯಮಗಳಿಂದ ರಾಜ್ಯ ಸರ್ಕಾರಕ್ಕೆ ಲುಕ್ಸಾನು

ಕಾಲೇಜು ಪ್ರಿಯಕರನ ನಂಬಿ ಗಂಡನಿಂದ ವಿಚ್ಛೇದನ ಪಡೆದ ಮಹಿಳೆಗೆ ಕಾದಿತ್ತು ಬಿಗ್​ ಶಾಕ್​!

ತಪ್ಪಿತಾ ಮತ್ತೊಂದು ಸ್ಫೋಟಕ ದುರಂತ!?; ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಸ್ಫೋಟಕ ಸಾಮಗ್ರಿ ವಶಕ್ಕೆ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
