ಪಾಟ್ನಾ:ಯುವಕನೊಬ್ಬನನ್ನು 100ಕ್ಕೂ ಹೆಚ್ಚು ಬಾರಿ ಚುಚ್ಚಿ ಕೊಂದ ಘಟನೆ ಬಿಹಾರದಲ್ಲಿ ನಡೆದಿದೆ.
ಚಿಂಟು(20) ಮೃತ. ಚಿಂಟುವಿನ ಮುಖ ಹಾಗೂ ದೇಹದ ಮೇಲೆ ಚಾಕುವಿನಿಂದ ತಿವಿದ ಗುರುತುಗಳಿವೆ. ಈತನ ಶವ ಪೊದೆಯೊಂದರಲ್ಲಿ ಪತ್ತೆಯಾಗಿದೆ.ಕಳೆದ ಒಂದು ವಾರದಿಂದ ಚಿಂಟು ಮನೆಯಿಂದ ನಾಪತ್ತೆಯಾಗಿದ್ದನು. ಈ ಹಿನ್ನೆಲೆಯಲ್ಲಿ ಆತನ ಮನೆಯವರು ನಾಪತ್ತೆ ಪ್ರಕರಣ ಕೂಡ ದಾಖಲಿಸಿದ್ದರು. ಇದೀಗ ಪೊದೆಯೊಂದರಲ್ಲಿ ಆತ ಶವವಾಗಿ ಪತ್ತೆಯಾಗಿದ್ದು, ಕೊಲೆ ಮಾಡಿ ಪೊದೆಗೆ ಬಿಸಾಕಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ:H3N2 ವೈರಸ್ ಭೀತಿ: ಶಾಲೆಗಳಿಗೆ ರಜೆ ಘೋಷಣೆ..!
ಕೆಲವು ದಿನಗಳ ಹಿಂದೆ ಚಿಂಟು ಹಾಗೂ ನೆರೆಮನೆಯ ರಾಮ ಮಹತೋ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಮಾತಿನ ಚಕಮಕಿ ನಡೆದಿದೆ. ಹೀಗಾಗಿ ಆತನೇ ಚಿಂಟುವನ್ನು ಕೊಲೆ ಮಾಡಿದ್ದಾನೆ ಎಂದು ಸಹೋದರ ಗಂಭೀರ ಆರೋಪ ಮಾಡಿದರು. ಸ್ಕ್ರ್ಯಾಪ್ ಡೀಲರ್ ಆಗಿ ಕೆಲಸ ಮಾಡುತ್ತಿದ್ದ ಚಿಂಟುವಿಗೆ ತಿಂಗಳ ಹಿಂದೆಯಷ್ಟೇ ಮದುವೆಯಾಗಿದೆ.
ಸದ್ಯ ಮೃತನ ಸಹೋದರ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ. 100 ಕ್ಕೂ ಹೆಚ್ಚು ಬಾರಿ ಚುಚ್ಚಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ವಿವರಿಸಿದರು.
ಭಾರಿ ಗಾತ್ರದ ಮೂಲಂಗಿ ಬೆಳೆದ ರೈತ; ಒಂದೊಂದು ಮೂಲಂಗಿಗಳು ತಲಾ 5 ಕೆ.ಜಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
