ಶ್ರೀನಗರ:ಜಮ್ಮು- ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ಒದಗಿಸಿದ್ದ 370ನೇ ವಿಧಿ ರದ್ದತಿಗೆ ಆ. 5ರಂದು ಒಂದು ವರ್ಷ ತುಂಬಿದೆ. ಈ ಅವಧಿಯಲ್ಲಿ ಭಯೋತ್ಪಾದನೆ ಚಟುವಟಿಕೆಗಳು ಸಾಕಷ್ಟು ನಿಯಂತ್ರಣಕ್ಕೆ ಬಂದಿವೆ. ಭದ್ರತಾ ಪಡೆಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಅನೇಕ ಉಗ್ರರು ಹತರಾಗಿದ್ದಾರೆ.
ಬಹಳಷ್ಟು ಉಗ್ರ ಸಂಘಟನೆಗಳು ನಾಯಕತ್ವವಿಲ್ಲದ ಸ್ಥಿತಿಗೆ ಮುಟ್ಟಿವೆ ಎಂದು ಜಮ್ಮು- ಕಾಶ್ಮೀರದ ಪೊಲೀಸ್ ಮಹಾ ನಿರ್ದೇಶಕ ದಿಲ್​ಬಾಗ್ ಸಿಂಗ್ ತಿಳಿಸಿದ್ದಾರೆ. ಹಿಂದೆ 400 ಇದ್ದ ಉಗ್ರರ ಸಂಖ್ಯೆ ಈಗ 200ಕ್ಕೆ ಇಳಿಕೆಯಾಗಿದೆ. ಎಲ್ಲ ಭಯೋತ್ಪಾದಕ ಸಂಘಟನೆಗಳು ಈಗ ನಾಯಕತ್ವರಹಿತವಾಗಿವೆ. ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗೆ ಯಾರನ್ನೇ ಆಗಲಿ ನಾಯಕರಾಗಿ ನೇಮಕ ಮಾಡಿದರೂ ಅವರನ್ನು ಸೆರೆ ಹಿಡಿಯಲಾಗುತ್ತಿದೆ ಅಥವಾ ಕೊಲ್ಲಲಾಗುತ್ತಿದೆ ಎಂದು ಸಿಂಗ್ ಹೇಳಿದ್ದಾರೆ. ಉಗ್ರ ಸಂಘಟನೆಗಳಿಗೆ ಸ್ಥಳೀಯರ ನೇಮಕಾತಿ ಇಳಿಮುಖವಾಗುತ್ತಿದೆ. ಗಡಿ ಭದ್ರತಾ ಪಡೆಗಳ ಕಾರ್ಯಾಚರಣೆಯಿಂದಾಗಿ ಪಾಕಿಸ್ತಾನ ಉಗ್ರರ ಒಳನುಸುಳುವಿಕೆ ಪ್ರಮಾಣ ಕಡಿಮೆಯಾಗಿದೆ. ಮತ್ತೊಂದೆಡೆ ಪಾಕಿಸ್ತಾನದ ಕದನ ವಿರಾಮ ಉಲ್ಲಂಘನೆ ಶೇ. 75 ಏರಿಕೆಯಾಗಿದೆ ಎಂದು ಸಿಂಗ್ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + eleven =
Remember me
