ತಿರುವನಂತಪುರಂ:ಆಂಧ್ರ ಪ್ರದೇಶದಿಂದ ಕೇರಳಕ್ಕೆ ಕಾರಿನಲ್ಲಿ ಸಾಗಿಸುತ್ತಿದ್ದ ಅಂದಾಜು 1 ಕೋಟಿ ರೂ. ಮೌಲ್ಯದ ಗಾಂಜಾವನ್ನು ಕೇರಳ ರಾಜ್ಯ ಅಬಕಾರಿ ಇಲಾಖೆ ಅಧಿಕಾರಿಗಳು ತಿರುವನಂತಪುರದಲ್ಲಿ ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಓರ್ವ ಕೊಲೆ ಆರೋಪಿ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ.
ಕಂದು ಬಣ್ಣದ ಪ್ಯಾಕೆಟ್​ನಲ್ಲಿದ್ದ ಭಾರಿ ಪ್ರಮಾಣದ ಗಾಂಜಾವನ್ನು ಆರೋಪಿಗಳು ಎರಡು ಕಾರಿನಲ್ಲಿ ತುಂಬಿಕೊಂಡು ಆಂಧ್ರ ಪ್ರದೇಶದಿಂದ ಬೆಂಗಳೂರು ಮಾರ್ಗವಾಗಿ ಕೇರಳಕ್ಕೆ ಸಾಗಿಸಿದ್ದರು. ಮಾರ್ಗ ಮಧ್ಯೆ ತಿರುವನಂತಪುರದ ಬಲರಾಮಪುರಂನಲ್ಲಿ ಕಾರುಗಳನ್ನು ತಡೆದು ಅಬಕಾರಿ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಇದನ್ನೂ ಓದಿ:ಆನ್​ಲೈನ್​ ಕ್ಲಾಸ್​​ಗಾಗಿ ಮೊಬೈಲ್​ಫೋನ್​ ಕದ್ದು ಸಿಕ್ಕಿಬಿದ್ದ ಬಾಲಕ, ಆಮೇಲೆ ಪೊಲೀಸರು ಮಾಡಿದ್ದೇನು?
ಈ ಬಗ್ಗೆ ಮಾತನಾಡಿರುವ ಅಬಕಾರಿ ಅಧಿಕಾರಿಗಳು, ಆರೋಪಿಗಳು ವಾಹನವನ್ನು ಡಿಕ್ಕಿ ಹೊಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದರು. ಅಲ್ಲದೆ, ನಮ್ಮೊಂದಿಗೆ ಕಾದಟಕ್ಕೂ ಇಳಿದರು. ಬಲವಂತವಾಗಿ ಅವರನ್ನು ನಮ್ಮ ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಆರೋಪಿಗಳನ್ನು ಜೋಮಿತ್​​ (38), ಸುರೇಶ್​​ ಕುಮಾರ್​ (32) ಮತ್ತು ವಿತಿನ್​ ರಾಜ್​ (30) ಎಂದು ಗುರುತಿಸಲಾಗಿದೆ. ವಿವಿಧ ಸೆಕ್ಷನ್​ ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿದೆ. ಆರೋಪಿ ಸುರೇಶ್​ ಕುಮಾರ್​ ತಿರುವನಂತಪುರಂ ಮತ್ತು ಕೊಲ್ಲಂನಲ್ಲಿ ದಾಖಲಾಗಿರುವ ಕೊಲೆ ಪ್ರಕರಣದ ಆರೋಪಿಯಾಗಿದ್ದಾನೆ. ಕೊಲೆ ಪ್ರಕರಣ ವಿಚಾರಣೆಯೂ ಇನ್ನು ಮುಂದುವರಿದಿದ್ದು, ಆರೋಪಿ ಜಾಮೀನಿನ ಮೇಲೆ ಹೊರಗಡೆ ಇದ್ದಾನೆ ಎಂದು ಅಬಕಾರಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆರೋಪಿಗಳು ಡ್ರಗ್ಸ್​ ಸಾಗಾಟಕ್ಕೆ ಬಳಸಿಕೊಂಡಿದ್ದ ಎರಡು ಇನ್ನೋವಾ ಕಾರಗಳನ್ನು ವಶಕ್ಕೆ ಪಡೆಯಲಾಗಿದೆ. ಇದೇ ವೇಳೆ ಪಲಕ್ಕಾಡ್​ನಲ್ಲಿಯೂ ಅಬಕಾರಿ ಅಧಿಕಾರಿಗಳು ಲಾರಿ ಮತ್ತು ಕಾರಿನಲ್ಲಿ ಸಾಗಿಸುತ್ತಿದ್ದ 50 ಕೆ.ಜಿ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.(ಏಜೆನ್ಸೀಸ್​)
ಐಎಸ್​ಡಿ ಕೇಳಿದ 40 ಪ್ರಶ್ನೆಗೆ ‘ಬ್ರಹ್ಮಗಂಟು’ ಗೀತಾ ಕೊಟ್ಟ ಉತ್ತರ ಇಲ್ಲಿದೆ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − eight =
Remember me
