ಪಾಲ್ಘರ್​:ಮಹಾರಾಷ್ಟ್ರದ ಪಾಲ್ಘರ್​ ಜಿಲ್ಲೆಯಲ್ಲಿ ಅಕ್ರಮವಾಗಿ ತಂಗಿದ್ದ 22 ಜನ ವಲಸಿಗರನ್ನು ಬಂಧಿಸಲಾಗಿದೆ. ಬಂಧಿತರೆಲ್ಲರೂ ಬಾಂಗ್ಲಾದೇಶದಿಂದ ಬಂದವರು ಎನ್ನಲಾಗಿದೆ.
ಮಂಗಳವಾರ ತಡರಾತ್ರಿಯಲ್ಲಿ ರಾಜೋಡಿ ಗ್ರಾಮದ ಗುಡಿಸಲುಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಯಾವುದೇ ಮಾನ್ಯ ದಾಖಲೆಗಳು ಇರದ ಒಟ್ಟು 22 ಜನರು ಸಿಕ್ಕಿಬಿದ್ದಿದ್ದಾರೆ. 12 ಮಹಿಳೆಯರು ಸೇರಿದಂತೆ 22 ಅಕ್ರಮ ವಲಸಿಗರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಇವರೆಲ್ಲರು ಸಣ್ಣ ಪುಟ್ಟ ಕೆಲಸವನ್ನು ಮಾಡಿಕೊಂಡು ಜೀವನ ಸಾಗಿಸುತ್ತಿದ್ದವರು ಎನ್ನಲಾಗಿದೆ.
ಭಾರತೀಯ ಪಾಸ್​ಪೋರ್ಟ್​ ಕಾಯ್ದೆ 1920 ಮತ್ತು ವಿದೇಶಿ ರಾಷ್ಟ್ರೀಯ ಕಾಯ್ದೆ 1946ರ ಅಡಿಯಲ್ಲಿ ಬಂಧಿತರ ಮೇಲೆ ದೂರು ದಾಖಲಿಸಿರುವುದಾಗಿ ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.(ಏಜೆನ್ಸೀಸ್​)

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 6 =
Remember me
