ರಾಯ್​ಪುರ್:ನಿನ್ನೆ ಚತ್ತೀಸ್​ಗಢದ ಬಿಜಾಪುರ ಜಿಲ್ಲೆಯ ಸಿಲಗುರ್ ಅರಣ್ಯ ವಲಯದಲ್ಲಿ ಸಿಆರ್​ಪಿಫ್​ ಯೋಧರು ಹಾಗೂ ಮಾವೋವಾದಿಗಳ ನಡುವೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಇದುವರೆಗೆ 22 ಯೋಧರು ಹುತಾತ್ಮರಾಗಿರುವುದು ಖಚಿತವಾಗಿದೆ.
ದಾಳಿ ನಡೆದ ಸಂದರ್ಭದಲ್ಲಿ ಐವರು ಯೋಧರು ಮೃತಪಟ್ಟಿದ್ದರು. 30 ಕ್ಕೂ ಹೆಚ್ಚು ಯೋಧರು ಕಾಣೆಯಾಗಿದ್ದರು. ಇಂದು 17 ಯೋಧರ ಮೃತದೇಹಗಳು ಪತ್ತೆಯಾಗಿರುವುದರಿಂದ ಒಟ್ಟು 22 ಯೋಧರು ದಾಳಿಯಲ್ಲಿ ಹುತಾತ್ಮರಾದಂತಾಗಿದೆ. ಇನ್ನೂ 8 ಯೋಧರಿಗಾಗಿ ಕಾರ್ಯಾಚರಣೆ ಮುಂದುವರೆದಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಈ ಭೀಕರ ದಾಳಿಯಲ್ಲಿ 5 ಕ್ಕಿಂತ ಹೆಚ್ಚು ಮಾವೋವಾದಿಗಳೂ ಹತರಾಗಿದ್ದು, 30 ಯೋಧರಿಗೆ ಗಾಯಗಳಾಗಿವೆ. ಗಂಭೀರ ಗಾಯಗಳಾದ 10 ಯೋಧರನ್ನು ರಾಯ್​ಪುರ್​​ದ ಸೇನಾ ಆಸ್ಪತ್ರೆಗೆ ಸಾಗಿಸಲಾಗಿದೆ.
#WATCH| On ground visuals from the site of Naxal attack at Sukma-Bijapur border in Chhattisgarh; 22 security personnel have lost their lives in the attackpic.twitter.com/nulO8I2GKn
— ANI (@ANI)April 4, 2021

ಇದನ್ನೂ ಓದಿ:ಅಪಘಾತಕ್ಕೀಡಾದವರನ್ನ ಕಾಪಾಡಲು ಓಡೋಡಿ ಬಂದವರ ಪ್ರಾಣವನ್ನೇ ಹೊತ್ತೊಯ್ದ ಜವರಾಯ!
ಭದ್ರತಾ ಸಿಬ್ಬಂದಿಯ ಸಾವನ್ನು ಕೇಂದ್ರ ಗೃಹ ಸಚಿವ ಅಮಿತ್​ ಷಾ ಅವರು ಖಂಡಿಸಿದ್ದಾರೆ. ಶಾಂತಿ ಮತ್ತು ಅಭಿವೃದ್ಧಿಯ ಶತ್ರುಗಳ ವಿರುದ್ಧ ನಮ್ಮ ಹೋರಾಟವನ್ನು ಮುಂದುವರಿಸುತ್ತೇವೆ ಎಂದು ನಕ್ಸಲರಿಗೆ ಷಾ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಶನಿವಾರ ಪ್ರಧಾನಿ ನರೇಂದ್ರ ಮೋದಿಯು ಸಹ ಗಾಯಗೊಂಡ ಭದ್ರತಾ ಸಿಬ್ಬಂದಿಯ ಶೀಘ್ರ ಗುಣಮುಖರಾಗಲು ಹಾರೈಸಿದ್ದಾರೆ. ಅಲ್ಲದೆ, ಮಾವೋವಾದಿಗಳ ವಿರುದ್ಧದ ಹೋರಾಟದಲ್ಲಿ ಮಡಿದ ಯೋಧರ ಕುಟುಂಬದ ಜತೆ ನಾವಿರುತ್ತೇವೆಂದು ಟ್ವೀಟ್​ ಮೂಲಕ ಧೈರ್ಯ ತುಂಬಿದ್ದಾರೆ.
ನಕ್ಸಲ್​ರ ವಿರುದ್ಧದ ಕಾರ್ಯಾಚರಣೆ ನಡೆದಾಗಿನಿಂದ ಈವರೆಗೂ ಪತ್ತೆಯಾಗದ 21 ಯೋಧರು..!

ಮಹಿಳೆಯನ್ನು ಬೆತ್ತಲೆಗೊಳಿಸಿ ಥಳಿತ: ಅಂಗಲಾಚಿ ಬೇಡಿಕೊಂಡರೂ ಬಿಡದ ಗ್ರಾಮಸ್ಥರು..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
