ಉತ್ತರಾಖಂಡ:28 ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಬಸ್ಸೊಂದು ಕಂದಕಕ್ಕೆ ಉರುಳಿ ಸುಮಾರು 22 ಮಂದಿ ಸಾವಿಗೀಡಾಗಿರುವಂಥ ದುರಂತವೊಂದು ಸಂಭವಿಸಿದೆ. ಉತ್ತರಾಖಂಡದ ಯಮುನೋತ್ರಿ ರಾಷ್ಟ್ರೀಯ ಹೆದ್ದಾರಿಯ ದಮ್ಟಾ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಬಸ್​ನಲ್ಲಿ ಮಧ್ಯಪ್ರದೇಶದ ಭಕ್ತರಿದ್ದು, ಚಾರ್​​ಧಾಮಾ ಯಾತ್ರೆಗೆ ಹೊರಟಿದ್ದರು. ಪೊಲೀಸ್ ಹಾಗೂ ಎಸ್​ಡಿಆರ್​ಎಫ್​ ತಂಡಗಳು ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ಜಾರಿಯಲ್ಲಿದೆ.
ಉತ್ತರಕಾಶಿಯ ಪುರೋಲದ ದಮ್ಟಾ ಎಂಬಲ್ಲಿ ಅಪಘಾತ ಸಂಭವಿಸಿದ ಹಲವಾರು ಮಂದಿ ಸಾವಿಗೀಡಾಗಿರುವುದು ದುರದೃಷ್ಟಕರ. ಈ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ. ಅಲ್ಲದೆ ಮಾಹಿತಿ ಸಿಕ್ಕ ತಕ್ಷಣ ರಕ್ಷಣಾ ಕಾರ್ಯಾಚರಣೆಗೆ ಆದೇಶ ನೀಡಲಾಗಿದ್ದು, ರಕ್ಷಣಾ ಸಿಬ್ಬಂದಿ ಕಾರ್ಯನಿರತರಾಗಿದ್ದಾರೆ ಎಂದು ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಧಾಮಿ ಹೇಳಿದ್ದಾರೆ.
ಮೃತಪಟ್ಟವರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರವನ್ನು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಹಾಗೇ ಗಾಯಗೊಂಡವರಿಗೆ ತಲಾ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಓವರ್​ ಹೆಡ್​ ಟ್ಯಾಂಕ್​​ ಮೇಲೆ ಕಾಲೇಜು ಯುವಕ-ಯುವತಿಯರ ಮೋಜು ಮಸ್ತಿ!

ದೇಶದಲ್ಲಿ ಅತ್ಯಾಚಾರ ಪ್ರಕರಣಗಳ ಇಳಿಕೆ; ಅದಕ್ಕೆ ಕಾರಣ ಮೋದಿ ಸರ್ಕಾರದ ಇದೊಂದು ಕ್ರಮ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − eight =
Remember me
